ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶು ಸಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಮರೆತ ವೈದ್ಯ, ಸಿಬ್ಬಂದಿಯಿಂದ ಘಟನೆ ನಡೆದಿದೆ. ಆಸ್ಪತ್ರೆಗೆ ಯಾರೇ ಬಂದರೂ ಮೊದಲು ಚಿಕಿತ್ಸೆ ಕೊಡಬೇಕು. ನಂತರ ದಾಖಲೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಎಂದರು.
ನಗರದಲ್ಲಿ ಮಾತನಾಡಿದ ಅವರು, ಮತ್ತೆ ಇಂತಹ ಘಟನೆಗಳು ನಡೆಯದಂತೆ ಕಾನೂನಿನಲ್ಲಿ ತಿದ್ದುಪಡಿ ಮಾಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸುಧಾಕರ್ ಹೇಳಿದ್ದಾರೆ.