ಬಾಗಲಕೋಟೆ: ದೇಶದಲ್ಲಿ ಪಿಎಫ್ ಐ ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.ಇದಕ್ಕೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಶಿವಾಜಿ ಸರ್ಕಲ್ ನಲ್ಲಿ ಹಿಂದೂ ಪರ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.ಪಿಎಫ್ಐ ನಿಷೇಧ ಸ್ವಾಗತಾರ್ಹ ವೆಂದು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಇನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಸಂಘಟನೆಗಳನ್ನು ‘ಕಾನೂನು ಬಾಹಿರ’ ಎಂದು ಘೋಷಿಸಿದೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಪಿಎಫ್ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದರು.
ನೂರಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ದಾಳಿಯ ಬೆನ್ನಿಗೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾಗ ಅಜಿತ್ ದೋವಲ್ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದರು. ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರು ಪಾಲ್ಗೊಂಡಿದ್ದ ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.