ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಮಂಗಳವಾರ ನಡೆದ ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯ ಮುಖ್ಯಾಂಶಗಳನ್ನು ಮುಂದೆ ಓದಿ.
ಎಐಸಿಸಿ ಒಬಿಸಿ ಅಧ್ಯಕ್ಷರಾದ ಅನಿಲ್ ಜೈಹಿಂದ್:
ಇಂದು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಆರಂಭಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಿತು. ಈ ಸಮಿತಿಯನ್ನು ಇತ್ತೀಚೆಗೆ ಆಯೋಜಿಸಲಾಗಿದ್ದು, ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷನಾಗಿರುವ ನಾನು ಈ ಸಮಿತಿಯ ಸಂಚಾಲಕನಾಗಿದ್ದೇನೆ. ಇಂದಿನ ಸಭೆಯಲ್ಲಿ ಕೆಲ ವಿಚಾರಗಳನ್ನು ಚರ್ಚೆ ಮಾಡಲಾಗಿದ್ದು, ಪಕ್ಷದ ಎಲ್ಲಾ ಹಿಂದುಳಿದ ವರ್ಗಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆ ಬುಧವಾರವೂ ಮುಂದುವರಿಯುವುದರಿಂದ ಇಂದಿನ ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ನಾನು ಯಾವುದೇ ಅಂಶ ಬಹಿರಂಗಪಡಿಸುವುದಿಲ್ಲ. ಬುಧವಾರ ಸಭೆ ಬಳಿಕ ಈ ಸಭೆಯಲ್ಲಿ ಚರ್ಚಿಸಲಾದ ಅಂಶಗಳು ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಸಮಾಜದ ಶೋಷಿತ ವರ್ಗಗಳ ಏಳಿಗೆಗಾಗಿ ಹೋರಾಟ ಮಾಡುತ್ತಿದ್ದಾರೆ.
ಬಿ.ಕೆ. ಹರಿಪ್ರಸಾದ್:
ಈ ಸಭೆಯ ಮೂಲ ಅಜೆಂಡಾ ದೇಶದಲ್ಲಿರುವ ಹಿಂದುಳಿದ ವರ್ಗದವರ ಅಭಿವೃದ್ಧಿ ಹಾಗೂ ಏಳಿಗೆಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದು ಚರ್ಚಿಸುವುದಾಗಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಸಮಸ್ಯೆಗಳಿರುತ್ತವೆ. ಜತೆಗೆ ರಾಷ್ಟ್ರದಲ್ಲಿ ಜಾತಿ ಗಣತಿ ಜಾರಿಗೆ ನಮ್ಮ ನಾಯಕರು ಕೈಗೊಂಡ ಹೋರಾಟದ ಬಗ್ಗೆ ಸಂಪೂರ್ಣವಾಗಿ ಚರ್ಚೆ ಮಾಡಲಾಗಿದೆ. ರಾಜಸ್ಥಾನ, ಪುದುಚೆರಿಯ ಮಾಜಿ ಸಿಎಂಗಳು ಸೇರಿದಂತೆ ಅನೇಕ ರಾಜ್ಯಗಳ ಪ್ರಮುಖ ಒಬಿಸಿ ನಾಯಕರು ಸೇರಿ ಈ ಸಮಿತಿಯಲ್ಲಿದ್ದಾರೆ.
ಇಂದು ಉದ್ಘಾಟನಾ ಸಭೆಯಾಗಿದ್ದು, ನಾಳೆ ಸಭೆಯಲ್ಲಿ ಹಿಂದುಳಿದ ವರ್ಗದವರು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಯಾವ ಸ್ಥಿತಿಯಲ್ಲಿದ್ದಾರೆ ಎಂದು ಸಂಪೂರ್ಣವಾಗಿ ಚರ್ಚಿಸಿ ನಾಳೆ ಸಂಪೂರ್ಣವಾಗಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು.
BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ: ಸಿ. ಎಂ.ಸಿದ್ದರಾಮಯ್ಯ
BJP ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ
KPCC ಕಚೇರಿಯಲ್ಲಿ ನಡೆದ AICC ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೀಡಿದ ಮಾಹಿತಿಯ ಹೈಲೈಟ್ಸ್ ಗಳು…
ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ OBC ನಾಯಕರ ಇವತ್ತಿನ ಮೊದಲ ಸಭೆ ಅರ್ಥಪೂರ್ಣವಾಗಿ ನಡೆದಿದೆ
ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ
ಮುಂದುವರೆದ ಸಭೆ ನಾಳೆ ನಡೆಯುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ ಬಳಿಕ ವಿವರವಾಗಿ ಮಾಹಿತಿ ನೀಡುತ್ತೇವೆ
GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ
BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ