ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಕಾಲಕಾಲಕ್ಕೆ ತಿದ್ದು ಪಡಿಯಾದ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021 ರನ್ವಯ ಉಳಿಕೆ ಮೂಲ ವೃಂದದಲ್ಲಿನ  ಗ್ರೂಪ್-‘ಬಿ’ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್‌ 92, ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ 90 ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್‌ ʼಬಿʼ ವೃಂದದ ಒಟ್ಟು 277 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್‌ 15 ರಿಂದ ಮೇ 14ರವರೆಗೆ ಅವಕಾಶ ನೀಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕನ್ನಡ ಭಾಷಾ ಪರೀಕ್ಷೆ ಮತ್ತು ಸಾಮಾನ್ಯ ಜ್ಞಾನ ಪರೀಕ್ಷೆ) ಆಗಸ್ಟ್‌ 11ರಂದು ನಡೆಸಲು ತಾತ್ಕಾಲಿಕವಾಗಿ ದಿನಾಂಕ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಲೋಕಸಭಾ ಆಯೋಗ ವೆಬ್‌ಸೈಟ್‌ ನೋಡಬಹುದು.

ಮುಂದಿನ ತಿಂಗಳು ಏಪ್ರಿಲ್ 15ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ 300 ರೂ. ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 150 ರೂ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Share.
Exit mobile version