ಬೆಳಗಾವಿ : ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆ’ ಮಂಡಿಸಿದೆ.
ಚಳಿಗಾಲದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇ ಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ ಮಸೂದೆ’ ಮಂಡಿಸಿದೆ.
ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸಲು ಇದು ಸುಲಭವಾಗಲಿದೆ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ಭೂ ಪರಿವರ್ತನೆ ವರ್ಗಾವಣೆ ಮಾಡಬಹುದು.
ಭೂ ಮಾಲೀಕರು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಅರ್ಜಿ ಪರಿಶೀಲಿಸಿ ಅನುಮೋದನೆ ನೀಡಬೇಕು. ಒಂದು ವೇಳೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡುವಲ್ಲಿ ವಿಫಲವಾದರೆ ಸಲ್ಲಿಕೆಯಾದ ಅರ್ಜಿಗೆ ಅನುಮತಿ ನೀಡಲಾಗಿದೆ ಎಂದು ಪರಿಗಣಿಸಬೇಕು ಎಂದು ಈ ಕಾನೂನು ಹೇಳುತ್ತದೆ. ಈ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.
BIGG NEWS : ರಾಜ್ಯದ ‘ಸ್ವಾತಂತ್ರ್ಯ ಹೋರಾಟ’ಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ
BIGG NEWS: ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭೂಮಿ ಪರಿವರ್ತನೆ’ ಪ್ರಕ್ರಿಯೆ ಇನ್ನಷ್ಟು ಸರಳ