BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

ಶಿವಮೊಗ್ಗ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ, ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ಸ್ವತಂತ್ರ ಹಳ್ಳಿ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಈಸೂರು ದಂಗೆಯು ಕೇವಲ ಒಂದು ಸ್ಥಳೀಯ … Continue reading BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ