Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BUDGET BREAKING : `ಖೇಲೋ ಇಂಡಿಯಾ ಮೀಷನ್’ ಆರಂಭ : ಕ್ರೀಡಾ ವಲಯದಲ್ಲಿ ಉದ್ಯೋಗ ಸೃಷ್ಠಿ.!

01/02/2026 11:45 AM

BUDGET BREAKING : ದೇಶದ ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ : ಕೇಂದ್ರ ಸರ್ಕಾರ ಘೋಷಣೆ

01/02/2026 11:43 AM

BUDGET BREAKING: ಪೂರ್ವದಿಂದ ಪಶ್ಚಿಮಕ್ಕೆ ಹೊಸ ರೈಲು ಹಾದಿ! ‘ಹಸಿರು ಕಾರ್ಗೋ’ ಮೂಲಕ ಸರಕು ಸಾಗಣೆಯಲ್ಲಿ ಹೊಸ ಕ್ರಾಂತಿ | Budget 2026

01/02/2026 11:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0919/04/2024 3:35 PM

ಬೆಂಗಳೂರು : “ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿದ್ದು ಹೀಗೆ:

“ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ವಿಚಾರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ” ಎಂದು ತಿಳಿಸಿದರು.

ಮಾಲೀಕಯ್ಯಾ ಗುತ್ತೇದಾರ್ ಹಾಗು ಶಾರದಾ ಮೋಹನ್ ಶೆಟ್ಟಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಗಳು:

ಮಾಲೀಕಯ್ಯಾ ಗುತ್ತೇದಾರ್ ಅವರು ಬಹಳ ವರ್ಷಗಳಿಂದ ನಮ್ಮ ಜೊತೆಗಿದ್ದವರು. ಕಾರಣಾಂತರಗಳಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ಭವಿಷ್ಯವಿಲ್ಲ ಎಂದು ಅರಿವಾಗಿ ಮತ್ತೆ ಮರಳಿ ಬಂದಿದ್ದಾರೆ.

ಈ ಹಿಂದೆ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ. ಮಾಲೀಕಯ್ಯಾ ಅವರು ಪಕ್ಷದ ಅನೇಕ ಹುದ್ದೆಗಳನ್ನು ಅಲಂಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ. ಈಗ ಯಾವುದೇ ಷರತ್ತುಗಳನ್ನು ವಿಧಿಸದೆ ಮರಳಿ ಬಂದಿದ್ದಾರೆ. ನಮ್ಮ ಶಾಸಕರಾದ ಎಂ.ವೈ ಪಾಟೀಲ್ ಅವರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಇವರ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಮರೆತು ಪಕ್ಷ ಕಟ್ಟಬೇಕು ಎಂಬುದು ಎಲ್ಲರ ಒಕ್ಕೊರಲಾಗಿದೆ.

ಬಿಜೆಪಿ ಒಂದಂಕಿ ದಾಟುವುದಿಲ್ಲ

ಬಿಜೆಪಿ- ದಳದವರ ಮೈತ್ರಿಯನ್ನು ಅವರ ಕಾರ್ಯಕರ್ತರೇ ವಿರೋಧಿಸಿದ್ದಾರೆ. ಉತ್ತರ ಭಾರತದಲ್ಲೂ ಸಾಕಷ್ಟು ಜನ ಬಿಜೆಪಿ ತೊರೆಯುತ್ತಿದ್ದಾರೆ. ಅವರು 400 ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದ್ದಿದ್ದರೇ ಇತರೇ ಪಕ್ಷಗಳ ನಾಯಕರನ್ನು ಏತಕ್ಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದರು. ನನಗೆ ಬಂದಿರುವ ಮಾಹಿತಿ ಪ್ರಕಾರ ಎನ್ ಡಿಎ ದೇಶದಲ್ಲಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಒಂದಂಕಿ ಸ್ಥಾನಗಳನ್ನು ಪಡೆಯುತ್ತಾರೆ.

ಬಿಜೆಪಿ- ದಳ ತೊರೆದು ಆನೇಕ ಕಾರ್ಯಕರ್ತರು, ನಾಯಕರು ನಮ್ಮ ಕಡೆ ವಾಲುತ್ತಿದ್ದಾರೆ. ಸರಮಾಲೆಯಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಗೆ ಧ್ವನಿಯಿಲ್ಲ. ಅವರು ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ. ಆದ ಕಾರಣ ಸ್ಥಳೀಯ ಮಟ್ಟದಲ್ಲಿ ಯಾರು ಪಕ್ಷ ಸೇರ್ಪಡೆಯಾಗುತ್ತಾರೆಯೋ ಅವರನ್ನು ಸೇರಿಸಿಕೊಳ್ಳಬೇಕು ಎಂದು ಎಲ್ಲರಿಗೂ ಸೂಚನೆ ನೀಡಿದ್ದೇನೆ.

ಇದೇ ವೇಳೆ ಮಾಜಿ ಶಾಸಕರಾದ ಶಾರದ ಮೋಹನ್ ಶೆಟ್ಟಿ ಅವರು ಹಾಗೂ ಆಮ್ ಆದ್ಮಿ ಪಕ್ಷದ ನಟರಾಜ್ ಅವರು ಹಾಗೂ ಸಿದ್ದು ಸಾಲಮನಿ, ಕರುಣಾಕರ್ ಭಟ್, ರಾಮಣ್ಣ, ಮಲ್ಲೇಗೌಡ ಪಾಟೀಲ್, ರವಿ ಪಾಟೀಲ್, ಚಂದ್ರಕಾಂತ್, ಶಿವಪ್ಪ ಅವರು ಪಕ್ಷ ಸೇರ್ಪಡೆಯಾದರು.

ಹುಬ್ಬಳ್ಳಿಯಲ್ಲಿ ‘ಯುವತಿ ಕೊಲೆ’ ಆರೋಪಿ ರಕ್ಷಣೆಗೆ ಕಾಣದ ಕೈಗಳ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ‘JDS ಕಿಡಿ’

BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ

Share. Facebook Twitter LinkedIn WhatsApp Email

Related Posts

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

01/02/2026 10:20 AM3 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM1 Min Read

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM1 Min Read
Recent News

BUDGET BREAKING : `ಖೇಲೋ ಇಂಡಿಯಾ ಮೀಷನ್’ ಆರಂಭ : ಕ್ರೀಡಾ ವಲಯದಲ್ಲಿ ಉದ್ಯೋಗ ಸೃಷ್ಠಿ.!

01/02/2026 11:45 AM

BUDGET BREAKING : ದೇಶದ ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ : ಕೇಂದ್ರ ಸರ್ಕಾರ ಘೋಷಣೆ

01/02/2026 11:43 AM

BUDGET BREAKING: ಪೂರ್ವದಿಂದ ಪಶ್ಚಿಮಕ್ಕೆ ಹೊಸ ರೈಲು ಹಾದಿ! ‘ಹಸಿರು ಕಾರ್ಗೋ’ ಮೂಲಕ ಸರಕು ಸಾಗಣೆಯಲ್ಲಿ ಹೊಸ ಕ್ರಾಂತಿ | Budget 2026

01/02/2026 11:43 AM

BUDGET BREAKING : ಮಧುಮೇಹ, ಕ್ಯಾನ್ಸರ್ ರೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಔಷಧಿಗಳ ಬೆಲೆ ಇಳಿಕೆ

01/02/2026 11:40 AM
State News
KARNATAKA

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

By kannadanewsnow0901/02/2026 10:20 AM KARNATAKA 3 Mins Read

ಬೆಂಗಳೂರು: ಸಿವಿಲ್ ಮೊಕದ್ದಮೆಗಳು ಬಾಕಿ ಇದ್ದ ಮಾತ್ರಕ್ಕೆ ಗಂಭೀರ ಮತ್ತು ಸಂಜ್ಞೇಯ (ಕಾಗ್ನೈಜಬಲ್) ಅಪರಾಧಗಳ ತನಿಖೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.