ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾಂಡೌಸ್ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
BIGG NEWS: ಶಿವಮೊಗ್ಗದಲ್ಲಿ ಆಸ್ತಿಗಾಗಿ ತಂದೆಯನ್ನೇ ಸುಪಾರಿ ಕೊಟ್ಟ ಪಾಪಿ ಮಕ್ಕಳು
ಜೊತೆಗೆ ವಿಪರೀತ ಶೀತದ ಗಾಳಿ ಬೀಸುತ್ತಿದೆ. ಹೀಗಾಗಿ ಜನರಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಶೀತಗಾಳಿ, ಮಳೆಯಿಂದಾಗಿ ಅನೇಕರು ಶೀತ, ಕೆಮ್ಮು, ನೆಗಡಿ ಅಂತ ಆಸ್ಪತ್ರೆಗೆ ಭೇಟಿ ಕೊಡುತ್ತಿದ್ದಾರೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯು ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೀಗ ಎದುರಾಗುತ್ತಿರುವ ಆರೋಗ್ಯ ಸಮಸ್ಯೆ ಕೋವಿಡ್ ಭೀತಿಯನ್ನು ಹೆಚ್ಚಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ , ಚಳಿ, ಶೀತಕ್ಕೂ ಕೋವಿಡ್ ಸೋಂಕಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
BIGG NEWS: ಶಿವಮೊಗ್ಗದಲ್ಲಿ ಆಸ್ತಿಗಾಗಿ ತಂದೆಯನ್ನೇ ಸುಪಾರಿ ಕೊಟ್ಟ ಪಾಪಿ ಮಕ್ಕಳು
ಚಳಿಗಾಲದ ಜೊತೆ ಚಂಡಮಾರುತದ ಎಫೆಕ್ಟ್ ಇದೆ. ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದ ಇರಬೇಕು. ಪೋಷಕರು, ವೃದ್ಧರನ್ನ, ಮಕ್ಕಳನ್ನ ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ವೈದ್ಯರಿಗೂ ಎಚ್ಚರಿಕೆವಹಿಸಲು ಸಭೆ ಕರೆದು ಸೂಚಿಸುತ್ತೇನೆ. ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದಲೂ ಮಾರ್ಗಸೂಚಿ ಹೊರಡಿಸಿದ್ದೇವೆ ಎಂದರು.