Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುತಾತ್ಮ ರೈತರ ಹೋರಾಟ ಅವಿಸ್ಮರಣೀಯ ; ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
KARNATAKA

ಹುತಾತ್ಮ ರೈತರ ಹೋರಾಟ ಅವಿಸ್ಮರಣೀಯ ; ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

By ಸುರೇಶ್‌

ಮಂಡ್ಯ :- ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಪಡೆಯಲು ಪೊಲೀಸರ ಗುಂಡೇಟಿಗೆ ಹೆದರದೆ ಹೋರಾಟ ನಡೆಸಿ, ಹುತಾತ್ಮರಾದ ರೈತರ ಹೋರಾಟ ಅವಿಸ್ಮರಣೀಯ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೋಮವಾರ ಹೇಳಿದರು.

ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಗೆಜ್ಜಲಗೆರೆ ಗೋಲಿಬಾರ್ ನಲ್ಲಿ ಮಡಿದ ವಳಗೆರೆಹಳ್ಳಿಯ ನಾಥೇಗೌಡ ಗೆಜ್ಜಲಗೆರೆ ಸಿದ್ದಪ್ಪ ಅವರ 43ನೇ ವರ್ಷದ ಹುತಾತ್ಮ ದಿನಾಚರಣೆ ಹಾಗೂ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ಪ್ರಾರಂಭದಲ್ಲಿ ಕಬ್ಬು ಬೆಳೆಗಾರರಿಗಾಗಿ ಸ್ಥಾಪಿಸಿದ್ದ ಸಂಘವೇ ಮುಂದೆ ರೈತ ಸಂಘವಾಯಿತು. ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ 1982 ರಲ್ಲಿ ಕಾರ್ಖಾನೆಗೆ ಒಪ್ಪಿಗೆ ಮಾಡಿದ ರೈತರಿಗೆ ಒಂದು ರೀತಿಯ ಹಣ, ಒಪ್ಪಿಗೆ ಮಾಡಿಸದ ರೈತರಿಗೆ ಒಂದು ರೀತಿಯ ಹಣ ನೀಡುತ್ತಿತ್ತು. ಇದರಿಂದ ಬೇಸತ್ತು ರೈತರು ಹೋರಾಟಕ್ಕಿಳಿದಿದ್ದು, ಬಂಡವಾಳ ಶಾಹಿಗಳ ಪರವಾಗಿದ್ದ ಅಂದಿನ ಮುಖ್ಯಮಂತ್ರಿ ಗುಂಡೂರಾವ್‌ ಅವರ ಸರ್ಕಾರ ವಳಗೆರೆಹಳ್ಳಿ ನಾಥೇಗೌಡ, ಗೆಜ್ಜಲಗೆರೆ ಸಿದ್ದಪ್ಪ ಅವರನ್ನು ಗುಂಡಿಕ್ಕಿ ಕೊಂದಿತು. ಸಕ್ಕರೆ ಕಾರ್ಖಾನೆಗಳು ಇಂದಿಗೂ ಕೂಡ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ. ರಾಜ್ಯದಲ್ಲಿ ನರಗುಂದ, ನವಲಗುಂದ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಸೇರಿದಂತೆ ವಿವಿಧೆಡೆ ನಡೆದ ಗೋಲಿಬಾರ್‌ನಿಂದ 159 ಮಂದಿ ರೈತರು ಪೋಲಿಸರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ರೈತ ಸಂಘ ರೈತರ ಸಮಸ್ಯೆ ಬಗೆಹರಿಸಲು ವೈಚಾರಿಕವಾಗಿ ಹುಟ್ಟಿಕೊಂಡ ಸಂಘಟನೆಯಾಗಿದ್ದು, ಪೊಲೀಸರ ಮತ್ತು ಸರ್ಕಾರಗಳ ಗುಂಡೇಟಿಗೆ ರೈತರು ಹೆದರುವುದಿಲ್ಲ. ರೈತರ ಮೇಲೆ ಸರ್ಕಾರಗಳು ನಡೆಸುವ ಕ್ರೌರ್ಯದ ವಿರುದ್ಧ ಹೋರಾಟ ನಿರಂತರವಾಗಿ ನಡೆಯುತ್ತದೆ. ಹುತಾತ್ಮರಾದ ಎಲ್ಲಾ ರೈತ ನಾಯಕರು, ರೈತಪರ ಹೋರಾಟಗಾರರ ದಾಖಲೆಗಳನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಸಲುವಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರಾಜ್ಯ ಸಂಚಾಲಕಿ ಮಮತಾ, ಮುಖಂಡರಾದ ಎಂ.ವಿ.ರಾಜೇಗೌಡ, ಕೆ.ಆರ್.ಜಯರಾಂ, ಮಲ್ಲಯ್ಯ, ತಿಮ್ಮೇಗೌಡ, ಬೋರಾಪುರ ಶಂಕರೇಗೌಡ, ಜಿ.ಎ.ಶಂಕರ್, ವೀರಪ್ಪ, ಲಿಂಗಾಪ್ಪಾಜಿ ಮತ್ತಿತತರು ಇದ್ದರು.

ವರದಿ : ಗಿರೀಶ್ ರಾಜ್ ಮಂಡ್ಯ

Share. Facebook Twitter LinkedIn WhatsApp Email

Related Posts

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

1 Min Read

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

2 Mins Read

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read
Recent News

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

State News
KARNATAKA

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

By ಸುರೇಶ್‌ KARNATAKA 1 Min Read

ಕಲಬುರಗಿ: ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್‌ (ಎಸ್‌ವಿಪಿ) ವೃತ್ತದಲ್ಲಿರುವ ವಿಂಟೆಜ್ ದಿ ರೆಸ್ಟೋ ಬಾರ್ & ರೆಸ್ಟೋರೆಂಟ್ ಕಟ್ಟಡದಲ್ಲಿ ಗುರುವಾರ…

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.