ಮೈಸೂರು: ಹೊನ್ನಾವರದಲ್ಲಿ ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ. ಇದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS : ನನ್ನ ಮಗನದ್ದು ಸಹಜ ಸಾವಲ್ಲ, ಹತ್ಯೆ : ಪರೇಶ್ ಮೇಸ್ತ ತಂದೆ ಬೇಸರ
ಮೇಸ್ತ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ. ಪರೇಶ್ ಮೇಸ್ತ ತನಿಖೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ.ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ
ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಏನು ಹೇಳ್ತಾರೆ ಗೊತ್ತಿಲ್ಲ. ರಕ್ತದ ಕಲೆ ಆಂಟಿರುವುದು ಅವರ ಕೈಗೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಟಿಪ್ಪು ಜಯಂತಿ ನಡೆದಿತ್ತು. ಟಿಪ್ಪು ಜಯಂತಿ ಮಾಡಿ ಗಲಭೆ ಮಾಡಿದರವರು. ಹಿಂದೂ ಕಾರ್ಯರ್ತರ ಕೊಲೆಗೆ ಅವರ ನಿರ್ಧಾರವೇ ಕಾರಣ ಎಂದು ಆರೋಪಿಸಿದ್ದಾರೆ.