ಲಕ್ನೋ: ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ಅಪ್ರಾಪ್ತೆ ಮೇಲೆ 5 ಜನರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಯ ಸಹೋದರನನ್ನು ಮನ ಬಂದಂತೆ ಥಳಿಸಿದ್ದಾರೆ.
ಪ್ರಧಾನಿ ಕಚೇರಿಯ ಸಿಬ್ಬಂದಿಗಳ ಮಕ್ಕಳಿಂದ ರಾಖಿ ಕಟ್ಟಿಸಿಕೊಂಡು, ಹಬ್ಬ ಆಚರಿಸಿದ ಪ್ರಧಾನಿ ಮೋದಿ
ದೇವಸ್ಥಾನದಿಂದ ಮನೆಗೆ ಇಬ್ಬರು ತೆರಳುತ್ತಿದ್ದರು. ಈ ವೇಳೆ ಐವರು ಆರೋಪಿಗಳು ಅವರನ್ನ ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ಬಾಲಕಿಯ ಸಹೋದರನನ್ನು ರೂಮ್ ನಲ್ಲಿ ಕಟ್ಟಿ ಹಾಕಿ ಥಳಿಸಿದ್ದಾರೆ. ಇದಾದ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಕಚೇರಿಯ ಸಿಬ್ಬಂದಿಗಳ ಮಕ್ಕಳಿಂದ ರಾಖಿ ಕಟ್ಟಿಸಿಕೊಂಡು, ಹಬ್ಬ ಆಚರಿಸಿದ ಪ್ರಧಾನಿ ಮೋದಿ
ಅತ್ಯಾಚಾರದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಹೋದರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ತಿಳಿದ ಸಂತ್ರೆಸ್ತೆಯ ಕುಟುಂಬಸ್ಥರು ಮೋದಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ