ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಜತೆಯಿಂದ ನಿಧನರಾದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ 1 ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
ದಾವಣಗೆರೆಯ ಬಾಪೂಜಿ ಸಂಸ್ಥೆಯ ಎಂಬಿಎ ಕಾಲೇಜು ಆವರಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam








