ಕೆಎನ್‌ಎನ್‌ಸಿನಿಮಾಡೆಸ್ಕ್‌: ಅಯೋಗ್ಯ ಚಿತ್ರದ ತರುವಾಯ ಒಂದು ಸುದೀರ್ಘಾವಧಿಯ ನಂತರ ನೀನಾಸಂ ಸತೀಶ್ ಮತ್ತು ರಚಿತಾ ರಾಮ್ ಜೋಡಿಯಾಗಿ ನಟಿಸುತ್ತಿರುವ ಚಿತ್ರ `ಮ್ಯಾಟ್ನಿ’.

ಈ ನಡುವೆ ಸಿನಿಮಾದಲ್ಲಿ ಈ ಜೋಡಿ ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿರುವ ಮ್ಯಾಟ್ನಿಯ ಬಿಡುಗಡೆ ದಿನಾಂಕದ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ.ಗಾಂಧಿ ನಗರದಲ್ಲಿ ಸದ್ಯಕ್ಕೆ ಗುಲ್ಲೆದ್ದಿರುವ ವಿಚಾರಗಳನ್ನಾಧರಿಸಿ ಹೇಳೋದಾದರೆ, ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಮ್ಯಾಟ್ನಿ ಬರಲಿದೆ ಎನ್ನಲಾಗಿದೆ.

ಇದಲ್ಲದೇ ಮನೋಹರ್ ಕಾಂಪಲ್ಲಿ ನಿರ್ದೇಶನದಲ್ಲಿ, f3 ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಮೂಡಿ ಬಂದಿರುವ ಮ್ಯಾಟ್ನಿ ಆರಂಭದಿಂದ ಇಲ್ಲಿಯವರೆಗೂ ಪ್ರೇಕ್ಷಕರ ಆಸಕ್ತಿ ಸೆಳೆಯುತ್ತಾ ಸಾಗಿ ಬಂದಿದೆ. ಹಂತ ಹಂತವಾಗಿ ಒಂದಿಷ್ಟು ವಿಚಾರಗಳನ್ನು ತಲುಪಿಸುತ್ತಾ ಬಂದಿರುವ ಈ ಚಿತ್ರವೀಗ ಬಿಡುಗಡೆಯ ಅಂಚಿಗೆ ಬಂದು ನಿಂತಿದೆ. ಸದ್ದೇ ಇಲ್ಲದಂತೆ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿಕೊಂಡಿರುವ ಮ್ಯಾಟ್ನಿಯ ಪ್ರಚಾರ ಕಾರ್ಯವೂಸದ್ಯದಲ್ಲೇ ಶುರುವಾಗಲಿದೆ.

ಈ ನಡುವೆ ಇತ್ತೀಚಿನ ವರ್ಷಗಳಲ್ಲಿ ವಿಶೇಷವಾದ, ಒಂದಕ್ಕೊಂದು ಭಿನ್ನವಾದ ಪಾತ್ರಗಳನ್ನೇ ನೀನಾಸಂ ಸತೀಶ್ ಒಪ್ಪಿಕೊಳ್ಳುತ್ತಾ ಬರುತ್ತಿದ್ದಾರೆ. ಅದರ ಭಾಗವೆಂಬಂತೆ ಕಾಣಿಸುತ್ತಿರುವ ಮ್ಯಾಟ್ನಿ ಮನಮೋಹಕ ಕಥೆಯ ಹೂರಣದೊಂದಿಗೆ ರೂಪಿಸಲ್ಪಟ್ಟಿದೆ ಎಂಬ ವಿಚಾರ ಕೂಡಾ ಈಗಾಗಲೇ ನಿಕ್ಕಿಯಾಗಿದೆ. ಒಂದು ಯಶಸ್ವೀ ಜೋಡಿ ಮತ್ತೊಂದು ಸಿನಿಮಾದಲ್ಲಿಯೂ ಜೊತೆಯಾದಾಗ ಸಹಜವಾಗಿಯೇ ಅದರತ್ತ ಒಂದಷ್ಟು ಕುತೂಹಲ ಮೂಡಿಕೊಳ್ಳುತ್ತೆ. ಅದರ ಜೊತೆ ಜೊತೆಗೇ ಮ್ಯಾಟ್ನಿ ತೆರೆಗಾಣೋದು ಯಾವಾಗ ಅಂತೊಂದು ಪ್ರಶ್ನೆ ಮೂಡಿಕೊಂಡಿತ್ತು. ಅದಕ್ಕೆ ಉತ್ತರ ಕೊನೆಗೂ ಉತ್ತರ ಸಿಕ್ಕಿದೆ.

Share.
Exit mobile version