ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆ ಎಸ್ ಆರ್ ಟಿ ಸಿ ಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಇದೊಂದು ವದಂತಿಯಾಗಿದ್ದು, ಸುಳ್ಳು ಸುದ್ದಿಯಾಗಿದೆ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಸ್ಪಷ್ಟ ಪಡಿಸಿದೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಲಗೇಜ್ / ಸರಕುಗಳನ್ನು ಸಾಗಿಸಲು ಹಿಂದಿನಿಂದಲೂ ವ್ಯವಸ್ಥೆ ಜಾರಿಯಿದ್ದು, ಅಂದರೆ ವಾಷಿಂಗ್ ಮಷಿನ್, ಫ್ರಿಡ್ಜ್, ಟ್ರಕ್ ಟಯರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳನ್ನು ಸಾಗಿಸಲು ಅವಕಾಶಗಳನ್ನು ದಿನಾಂಕ 05-11-1999 ರಿಂದಲೇ (ಬಸ್ಸಿನಲ್ಲಿರುವ ಸ್ಥಳಾವಕಾಶಕ್ಕೆ ಅನುಗುಣವಾಗಿ) ನಿಗಮದಲ್ಲಿ ಜಾರಿಯಲ್ಲಿರುತ್ತದೆ ಎಂದು ತಿಳಿಸಿದೆ.
ಈ ವ್ಯವಸ್ಥೆಯ ಅನುಷ್ಠಾನದಲ್ಲಿ ಕಾಲದಿಂದ ಕಾಲಕ್ಕೆ ದರಗಳ ಪರಿಷ್ಕರಣೆ, 30 ಕೆಜಿ ವರೆಗೆ ಲಗೇಜ್ ಕೊಂಡೊಯ್ಯಲು ಉಚಿತ ಅವಕಾಶ, ಸಾಗಿಸಬಹುದಾದ ವಸ್ತುಗಳ ಪ್ರಯಾಣ ಇತ್ಯಾದಿಗಳನ್ನು ಉಲ್ಲೇಖಿಸಿ ಪ್ರಸ್ತುತ ದಿನಾಂಕ: 28-10-2022 ರಿಂದ ಲಗೇಜ್ ನಿಯಮ / ಸುತ್ತೋಲೆ ಜಾರಿಯಲ್ಲಿರುತ್ತದೆ. ದಿನಾಂಕ: 28-10-2022 ರ ನಂತರ ಇತ್ತೀಚೆಗೆ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿರುವುದಿಲ್ಲ ಎಂಬುದನ್ನು ತಮ್ಮ ಆದ್ಯ ಗಮನಕ್ಕೆ ತರಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.
SHOCKING: ‘ಹಸ್ತಮೈಥುನ’ಕ್ಕಾಗಿಯೇ 30 ನಿಮಿಷ ವಿರಾಮ ಕೊಟ್ಟ ಕಂಪನಿ: ಕಾರಣ ಏನೆಂದು ಬಿಚ್ಚಿಟ್ಟ ಸಂಸ್ಥಾಪಕರು
ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ