ಮಂಗಳೂರು: ಜಿಲ್ಲೆಯಲ್ಲಿ ಎಸ್ ಡಿಪಿಐ ಕಚೇರಿ ಮೇಲೆ ಎನ್ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್ ಟಾಪ್ , ಪೆನ್ ಡ್ರೈವ್ ಜಪ್ತಿ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕೇಸ್ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.
ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್ಐ, ಎಸ್ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.