ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 47ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿಭೇದಿಯಿಂದ ಅಸ್ವಸ್ಥರಾಗಿದ್ದರು.ಅವರಲ್ಲಿ ಮೂರು ಜನ ವಿದ್ಯಾರ್ಥಿನಿಯರಿಗೆ ಕಾಲರಾ ರೋಗ ಪತ್ತೆಯಾಗಿತ್ತು ಇದೀಗ ರಾಜ್ಯಾದ್ಯಂತ ಒಟ್ಟು ಕಾಲರ ರೋಗದ ಪ್ರಕರಣ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಬೆಂಗಳೂರು ರಾಮನಗರ ನಂತರ ಇದೀಗ ಮೈಸೂರಿಗೆ ಕಾಲರಾ ರೋಗ ಕಾಲಿಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 12, ಬೆಂಗಳೂರು ನಗರ 9 ಪ್ರಕರಣಗಳು ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಒಂದು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಕಾಲರಾ ಪ್ರಕರಣ ಪತ್ತೆಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.