ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,25,785 ಕ್ಕೆ ಏರಿಕೆಯಾಗಿದೆ.
ಕೋವಿಡ್-19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 15,528 ಹೊಸ ಪ್ರಕರಣಗಳು ಮತ್ತು 25 ಸಾವುಗಳು ದಾಖಲಾಗಿವೆ. 1,43,654 ಸಕ್ರಿಯ ಪ್ರಕರಣಗಳಿವೆ.
India records 15,528 new COVID19 cases today; Active caseload at 1,43,654 pic.twitter.com/VgTiwGrYp6
— ANI (@ANI) July 19, 2022