ವಿಜಯನಗರ: ಜಿಲ್ಲೆಯ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಪ್ರವಾಸಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಅವರ ಕಚೇರಿ ಬೀಗ ಮುರಿದು ಕಳವು ಮಾಡಲಾಗಿದೆ.
ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿ ಈ ಕೃತ್ಯ ನಡೆಸಲಾಗಿದೆ. ರಾತ್ರಿ ಒಂದು ಗಂಟೆಯಿಂದ ಬೆಳಗಿನ ಜಾವ 4 ಗಂಟೆ ನಡುವೆ ಕಳ್ಳತನ ಮಾಡಲಾಗಿದೆ.
ಲತಾ ಮಲ್ಲಿಕಾರ್ಜನು ಅವರ ಕಚೇರಿಯಲ್ಲಿದ್ದಂತ 2.5 ಲಕ್ಷ ನಗದು, 10.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ.
ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿಗೆ ನುಗ್ಗಿದಂತ ನಾಲ್ವರು ಮುಸುಕುಧಾರಿಗಳಿಂದ ನಗ ನಾಣ್ಯ ಕಳವು ಮಾಡಲಾಗಿದೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!