ಹೊಸಪೇಟೆ: ವಾಸಿಸುವವನೇ ನೆಲದ ಒಡೆಯ ಎಂಬುದು ನಮ್ಮ ಸಂಕಲ್ಪವಾಗಿದೆ. ಇದರಡಿ ನಾವಿಂದು 1,11,111 ಮಂದಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಾವಿಂದು 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿದ್ದೇವೆ.
– ಮುಖ್ಯಮಂತ್ರಿ @siddaramaiah #ಪ್ರಗತಿಯತ್ತ_ಕರ್ನಾಟಕ#2yearsOfGuaranteeSarkara pic.twitter.com/RmgfnaDhqf
— CM of Karnataka (@CMofKarnataka) May 20, 2025
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.
ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
BIG NEWS : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್