ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಮೂರ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಹುನಗುಂದಲ್ಲಿ ನೂರಕ್ಕೂ ಹೆಚ್ಚು ಮನೆ ಜಲಾವೃತಗೊಂಡಿದೆ.
BIGG NEWS: ಮಳೆಯಿಂದ ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ ರಕ್ಷಣೆ
ಹೀಗಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಇನ್ನು ದೇವಸ್ಥಾನದ ಕೂಡ ಮುಳುಗಡೆಯಾಗಿದೆ. ಅನ್ನದಾನೇಶ್ವರ ಮಠ ಕೂಡ ಮಳೆಯಿಂದ ಮುಳುಗಡೆಯಾಗಿದ್ದು, ಅಲ್ಲಿನ ಜನರು ಸಿಲುಕಿಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ನಾಲ್ಕ ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಮಳೆಗೆ ಬಜರು ರೋಸಿ ಹೋಗಿದ್ದಾರೆ. ಇನ್ನೂ ನಾಲ್ಕು ದಿನ ಅಂದರೆ ಸಂಪೂರ್ಣ ಹೈರಾಣಾಗುತ್ತಾರೆ.