ಬೆಂಗಳೂರು; ನೀವು ಉಪ ಮುಖ್ಯಮಂತ್ರಿಯೋ ಅಥವಾ ಬೀದಿ ರೌಡಿಯೋ? ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲಾ ಜನಸಾಮಾನ್ಯರಿಗೆ ಇದೆ ಎಂಬುದಾಗಿ ಜೆಡಿಎಸ್ ಹೇಳಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ, ನನ್ನತ್ರ ಇದೆಲ್ಲಾ ಬೇಡ” ! ಡಿಕೆ ಶಿವಕುಮಾರ್ ಹೌದು.. ಮಿಸ್ಟರ್ ಧಮ್ಕಿ ಡಿಕೆಶಿ ಅವರೇ, ಆ ದಿನಗಳಲ್ಲಿ ನೀವು ಯಾರ ಜೊತೆ ಇದ್ದೀರಿ ? ನಿಮ್ಮ ಹಿನ್ನೆಲೆ ಏನು ? ಎಂಬುದು ಸಾಮಾನ್ಯ ಜನರಿಗೆ ಗೊತ್ತಿಲ್ಲ ಎಂದಿದೆ.
ಉಪಮುಖ್ಯಮಂತ್ರಿಯಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬೀದಿರೌಡಿಯಂತೆ ವೇದಿಕೆಯಲ್ಲೇ ನಾಗರಿಕರಿಗೆ ಹೆದರಿಸುವುದು, ಬೆದರಿಸುವುದು ಜನಪ್ರತಿನಿಧಿಗಳಿಗೆ ಶೋಭೆ ತರುವುದಿಲ್ಲ ಎಂದಿದೆ.
ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆ. ಜನಪ್ರತಿನಿಧಿಯನ್ನು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಜನಸಾಮಾನ್ಯರಿಗೂ ಇದೆ. “ಸಂವಿಧಾನ ರಕ್ಷಿಸುತ್ತೇವೆ” ಎಂದು ಸಂವಿಧಾನ ಪುಸ್ತಕ ಹಿಡಿದರೇ ಸಾಲದು. ಈ ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ ಎಂದು ತಿಳಿಸಿದೆ.
"ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ, ನನ್ನತ್ರ ಇದೆಲ್ಲಾ ಬೇಡ" ! @DKShivakumar
ಹೌದು.. ಮಿಸ್ಟರ್ ಧಮ್ಕಿ ಡಿಕೆಶಿ ಅವರೇ,
ಆ ದಿನಗಳಲ್ಲಿ ನೀವು ಯಾರ ಜೊತೆ ಇದ್ದೀರಿ ? ನಿಮ್ಮ ಹಿನ್ನೆಲೆ ಏನು ? ಎಂಬುದು ಸಾಮಾನ್ಯ ಜನರಿಗೆ ಗೊತ್ತಿಲ್ಲ.
ಉಪಮುಖ್ಯಮಂತ್ರಿಯಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬೀದಿರೌಡಿಯಂತೆ ವೇದಿಕೆಯಲ್ಲೇ… pic.twitter.com/s7O3c9pZqN
— Janata Dal Secular (@JanataDal_S) December 13, 2025
ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪಂಕಜ್ ಚೌಧರಿ ಆಯ್ಕೆ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam








