ಚಿತ್ರದುರ್ಗ : ಪೊಲೀಸ್ ಇಲಾಖೆ ಹಾಗೂ ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹಿರಿಯೂರು ತಾಲ್ಲೂಕು ಡಿವೈಎಸ್ಪಿ ಶಿವಕುಮಾರ್ ಅಭಿಪ್ರಾಯಪಟ್ಟರು.
ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಹಿರಿಯೂರು ಉಪವಿಭಾಗ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಠಾಣೆಗಳ ವ್ಯಾಪ್ತಿಯಲ್ಲಿನ ಪ್ರತಿ ಗ್ರಾಮದ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಸಾರ್ವಜನಿಕರ ಆಹವಾಲು ಸ್ವೀಕರಿಸಲಿದ್ದಾರೆ. ಗ್ರಾಮದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ಕಡಿವಾಣ ಹಾಕಲು, ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಕಾರ್ಯಕ್ರಮ ಸಹಾಯಕವಾಗಿದೆ. ಸಾರ್ವಜನಿಕರು ಸಹಾಕರ ನೀಡಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಎನ್. ಸಿದ್ದೇಶ್ ಮಾತನಾಡಿ ಕರ್ನಾಟಕ ಪೊಲೀಸ್ ಜನಸ್ನೇಹಿ ಪೊಲೀಸ್ ಆಗಿದ್ದು, ಸಮುದಾಯ ವ್ಯವಸ್ಥೆಯನ್ನು ಬಲಪಡಿಸಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಜನಸ್ನೇಹಿ ಕಾರ್ಯಕ್ರಮವಾಗಿದೆ. ಕಾನೂನು ಸುವ್ಯವಸ್ಥೆಗೆ ಪರಿಹಾರ ನೀಡುವ ದೃಷ್ಟಿಯಿಂದ ಸಾರ್ವಜನಿಕರಿಗೆ ಸರ್ಕಾರ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಜಾರಿಗೆ ತಂದಿದ್ದು, ಸಾರ್ವಜನಿಕರು ಈ ಸದುಪಯೋಗ ಪಡಿಸಿಕೊಳ್ಳಬೇಕು. ತಮ್ಮ ಮನೆಯ ಸುತ್ತ ಮುತ್ತ ನಡೆಯುವ ಸಮಾಜ ಘಾತುಕ ಘಟನೆಗಳನ್ನು ತೊಡೆದು ಹಾಕಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೊಂದು ಉತ್ತಮವಾದ ಕಾರ್ಯವಾಗಿದೆ ಎಂದು ತಿಳಿಸಿದರು.
ಸಿಪಿಐ ಗುಡ್ಡಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಬೀಟ್ ವ್ಯವಸ್ಥೆಯಲ್ಲಿ ಕಾಲಕ್ರಮೇಣ ಬದಲಾವಣೆ ಮಾಡಲಾಗಿದ್ದು, ಅದರಂತೆ ಸರ್ಕಾರ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ. ಬಿಟ್ ಪೊಲೀಸ್ ವ್ಯವಸ್ಥೆ ಮೂಲಕ ಸಮುದಾಯ, ಜನರೊಂದಿಗೆ ನೇರ ಸಂಪರ್ಕ ಸಾಧಿಸಿ, ಜನಸ್ನೆಹಿ ಪೊಲೀಸ್ ಆಗಿದೆ. ಮನೆಮನೆಗೆ ಪೊಲೀಸ್ ಮೂಲಕ ಜನರ ಮನೆ ಬಾಗಿಲಿಗೆ ಬಂದು, ಬಿಟ್ ಪೊಲೀಸ್ ಅವರ ಸಮಸ್ಯೆಗಳನ್ನು ಆಲಿಸಿ, ದಾಖಲಿಸಲಿದ್ದಾರೆ. ಮತ್ತು ಸಾಧ್ಯವಾದ ಸ್ಥಳೀಯವಾಗಿ ಕಾನೂನು ಪ್ರಕಾರ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ಅಥವಾ ಸಂಬಂದಿಸಿದವರ ಗಮನಕ್ಕೆ ತಂದು ಪರಿಹರಿಸುವ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಬಾಲಕೃಷ್ಣ, ವೃತ್ತ ನಿರೀಕ್ಷಕರಾದ ರಾಘವೇಂದ್ರ ಕಾಂಡಿಕೆ, ಈ. ಆನಂದ್, ಶ್ರೀರಾಂಪುರ ಠಾಣೆ ಸಿಪಿಐ ಪಿಬಿ. ಮಧು, ಪಿಎಸ್ಐಗಳಾದ ಎಎಸ್. ಮಹೇಶ್ ಗೌಡ, ಅನುಸೂಯಮ್ಮ, ಎಂಟಿ. ದೀಪು, ಶಶಿಕಲಾ, ದೇವರಾಜ್, ಬೀಟ್ ಸದಸ್ಯರು, ಪೊಲೀಸ್ ಠಾಣೆಯ ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ಚಿದಾನಂದ ಮಸ್ಕಲ್, ಹಿರಿಯೂರು
ಧರ್ಮಸ್ಥಳದ ವಿಚಾರದಲ್ಲಿ ಜನರ ಅನುಮಾನ ನಿವಾರಣೆ ಸರ್ಕಾರದ ಕರ್ತವ್ಯ: ಮಾಜಿ ಸಂಸದ ಡಿ.ಕೆ ಸುರೇಶ್
ವಾಣಿ ವಿಲಾಸ ಸಾಗರಕ್ಕೆ ನೀರು: ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ