ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಬೆಂಗಳೂರಲ್ಲಿ ಅರ್ಚಕ ಗುರುರಾಜ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯೂಟ್ಯೂಬ್ ಚಾನೆಲ್ ವೊಂದರಕ್ಕೆ ಹೇಳಿಕೆ ನೀಡಿದ್ದಂತ ಅರ್ಚಕ ಗುರುರಾಜ್ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಈ ದೂರು ಆಧರಿಸಿ ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಅರ್ಚಕ ಗುರುರಾಜ್ ಅಶ್ಲೀಲ ಪದ ಬಳಕೆ ಮಾಡಿದ್ದರು. ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲೆಹಿಡುಕ ಎಂಬುದಾಗಿ ಹೇಳಿದ್ದರು.
ಈ ಹಿನ್ನಲೆಯಲ್ಲಿ ಅರ್ಚಕ ಸ್ಥಾನದಿಂದ ರಾಘವೇಂದ್ರ ಸೇವಾ ಸಮಿತಿಯಿಂದ ಗುರುರಾಜ್ ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೆ ಅವರನ್ನು ಕೆಂಗೇರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
BREAKING: ಬಿಬಿಎಂಪಿ ಕಾಮಗಾರಿ ಅನುಷ್ಠಾನ ಅಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ತನಿಖಾ ವರದಿ ಸಲ್ಲಿಸಿದ ಆಯೋಗ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ