ಹುಬ್ಬಳ್ಳಿ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿತು ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಆಹಾರ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ಪ್ರಜ್ವಲ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಬಿಜೆಪಿಗೆ ಯಾವುದೇ ಮುಜುಗರವಿಲ್ಲ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯಿಂದ ಬಿಜೆಪಿಗೆ ಯಾವುದೇ ಮುಜುಗರ ವಿಲ್ಲ. ನ್ಯಾಯಾಲಯ ಎಲ್ಲವನ್ನು ವಿಚಾರಣೆ ಮಾಡಿ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಎಷ್ಟು ಜನ ಅಪರಾಧಿಗಳ ಜೊತೆ ಇದ್ದರು? ರಾಹುಲ್ ಖಲಿಸ್ತಾನಿ ಉಗ್ರರ ಜೊತೆ ಇರುವ ಫೋಟೋ ಇದೆ. ಯಾಸಿನ್ ಮಲ್ಲಿಕ್ ಸೇರಿ ಅನೇಕ ಜೊತೆಗಿರುವ ಫೋಟೋಗಳಿವೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ಅವರ ಜೊತೆಗೆ ನಮ್ಮ ಮೈತ್ರಿ ಇದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದರು.