ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು. ಈ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2 ( Second PUC Exam-2) ನಡೆದಿತ್ತು. ಇಂತಹ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಕಳೆದ ಏಪ್ರಿಲ್.24ರಿಂದ ಮೇ.8ರವರೆಗೆ ನಡೆದಿತ್ತು. ಈ ಪರೀಕ್ಷೆಗೆ 1.57 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಂತಹ ಪರೀಕ್ಷೆಯ ಫಲಿತಾಂಶವನ್ನು ಇಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಶಾಲಾ ಪರೀಕ್ಷೆ ಮಂಡಳಿಯು ತಿಳಿಸಿದೆ.
ಅಂದಹಾಗೇ ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದಂತ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೆ ಮುನ್ನವೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎನ್ನಲಾಗುತ್ತಿದೆ.
ನಿಮ್ಮ ಮೊಬೈಲ್ ಫೋನಿನ `ಬ್ಯಾಕ್ ಕವರ್’ ಬಣ್ಣ ಬದಲಾಗಲು ಕಾರಣ ಏನು ಗೊತ್ತಾ?
ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್