ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೀಗಾಗಿ ಹಿಂದೂ-ಮುಸ್ಲಿಂ ಸಮುದಾಯದ ಸಭೆ ನಡೆಸಲಾಯಿತು. ಈ ಸಭೆಯಲ್ಲೇ ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದೇ ಕಲ್ಲು ತೂರಾಟಕ್ಕೂ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ಮುಸ್ಲೀಂ ಮುಖಂಡರೊಬ್ಬರು ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಂತಿ ಸಭೆ ನಡೆಯಿತು. ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಕಾರಣ, ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ಸಭೆಯಲ್ಲಿ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳೀಯ ಮುಖಂಡರು ಸಾಥ್ ನೀಡಿದರು.
ನಿರೀಕ್ಷೆಯಂತೆ ಸಭೆಗೆ ಬಿಜೆಪಿ, ಹಿಂದೂ ಮುಖಂಡರು, ಕಾರ್ಯಕರ್ತರು ಗೈರು ಹಾಜರಾಗಿದ್ದರು. ಆದರೇ ಮುಸ್ಲಿಂ ಸಮುದಾಯದ ಮುಖಂಡರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳಿಗಷ್ಟೇ ಸೀಮಿತವಾದ ಸಭೆ ನಡೆಯಿತು.
ಈ ಸಭೆಯಲ್ಲಿ ಭಾಗಿಯಾಗಿದ್ದಂತ ಮುಸ್ಲೀಂ ಮುಖಂಡ ಆಸೀಪ್ ಪಾಷಾ ಎಂಬುವರು, ಯಾರು ಕಿಡಿಗೇಡಿಗಳು ಮಾಡಿದ್ದರೋ ಅವರಿಗೆಲ್ಲ ಶಿಕ್ಷೆ ಆಗಬೇಕು. ಇದರ ಹಿಂದೆ ಯಾರಿದ್ದಾರೆ ತನಿಖೆ ಮಾಡಬೇಕು. ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದರಿಂದಾಗಿಯೇ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ಮಾಡಬೇಕು ಎಂಬುದಾಗಿ ಆಗ್ರಹಿಸಿದರು.
ವರದಿ: ಗಿರೀಶ್ ರಾಜ್, ಮಂಡ್ಯ
ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಾಡಿ ಕೋರ್ಟ್ ಆದೇಶ
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಭಾರತದಿಂದ ಈ ಸಲಹೆ; ವಿಮಾನಗಳ ಹಾರಾಟ ರದ್ದು