ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನಲೆಯಲ್ಲಿ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಹಿಂದಿನ ಮೌಲ್ಯಾಂಕನದ ವಿಶ್ಲೇಷಣೆ ಆಧಾರದ ಮೇಲೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಉಲ್ಲೇಖ-2ರಂತ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪಕಟಿಸಲು ತಿಳಿಸಲಾಗಿರುತ್ತದೆ. ತದನಂತರದಲ್ಲಿ ಫಲಿತಾಂಶವನ್ನು ಪಕಟಿಸಲು ಘನ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ರು ಅಂತಿಮ ತೀರ್ಪು ಬಾಕಿ ಇರುತ್ತದೆ ಎಂದು ಹೇಳಿದ್ದಾರೆ.
ಪುಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ದಿನಾಂಕ: 29-05-2024 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ/ತರಗತಿಗ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪುವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪುಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಲ್ಲೇಖ-3ರನ್ನಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಈ ಕೆಳಕಂಡಂತೆ ಕ್ರಮವಹಿಸುವುದು ಎಂದು ತಿಳಿಸಿದ್ದಾರೆ.
ಘನ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪಕರಣ ಸಂಖ್ಯೆ:8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FAL 1, FA-2, FA-3, FA-4 ಮತ್ತು SA-1 ಗಳ ಮೌಲ್ಯಾಂಕನದ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.
ಅಂಜಲಿ ಹತ್ಯೆ ಕೇಸ್ ‘CBI’ಗೆ ವಹಿಸುವುದಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್
BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ