ಕೆಎನ್‌ಎನ್‌ಸಿನಿಮಾಡೆಸ್ಕ್‌: ಶಭ್ಬಾಷ್ ಸಿನಿಮಾವು ತನ್ನ ಎರಡನೇ ಹಂತದ ಚಿತ್ರೀಕರಣ ಮುಕ್ತವಾಗಿದ್ದು, ಇದರ ಬಗ್ಗೆ ಚಿತ್ರತಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಕ್ತಾಯ ಮಾಡಿದೆ. ಈ ನಡುವೆ , ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿತ್ತು. ಇದಲ್ಲದೇ ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ ಮುಂತಾದೆಡೆಗಳಲ್ಲಿ ಬಹುಮುಖ್ಯ ಭಾಗಗಳನ್ನು ಸೆರೆಹಿಡಿಯಲಾಗಿದೆ. ದುರ್ಗಮವಾದ ಪ್ರದೇಶಗಳಲ್ಲಿ ಸಿನಿಮಾ ತಂಡ ಇತ್ತು.

 

ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿರುವುದು ಚಿತ್ರತಂಡದ ತನ್ನ ಸಂತಸವನ್ನು ಹಂಚಿಕೊಂಡಿದೆ. ಈ ನಡುವೆ ವಿಶೇಷವಾಗಿ, ಎರಡು ಹಾಡುಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ಇಲ್ಲಿ ವಾಸವಾಗಿರುವ ಜೇನುಕುರುಬರ ಹಾಡಿಗಳಿಗೆ ಭೇಟಿ ನೀಡಿದ್ದ ಚಿತ್ರತಂಡ, ಆ ಬುಡಕಟ್ಟು ಜನಾಂಗದ ಹಾಡೊಂದನ್ನು ಚಿತ್ರೀಕರಿಸಿಕೊಂಡಿದೆ. ಅದಕ್ಕೆ ಸಾಹಿತ್ಯ, ಸಂಗೀತವೆಲ್ಲ ಆ ಬುಡಕಟ್ಟು ಜನರದ್ದೇ ಎಂಬುದು ವಿಶೇಶ ವಾಗಿದೆ. ಒಂದು ದಿನ ಸಂಜೆ ಆರು ಗಂಟೆಯಿಂದ ಮಾರನೇ ದಿನ ಮುಂಜಾನೆ ಆರು ಗಂಟೆಯವರೆಗೂ ಸಿನಿಮಾ ತಂಡ ಚಿತ್ರೀಕರಣ ಮಾಡಿದೆಯಂತೆ.

 ಮಡಿಕೇರಿ ಅಂದಮೇಲೆ ಅಲ್ಲಿನ ಮಂಜು, ಚಳಿಯ ತೀವ್ರತೆ ಎಂಥಾದ್ದೆಂಬುದು ಎಲ್ಲರಿಗೂ ತಿಳಿದಿರುತ್ತೆ. ಅದರ ನಡುವೆಯೂ ಅಹೋರಾತ್ರಿ ಚಿತ್ರೀಕರಣ ನಡೆಸಿದ ರೋಮಾಂಚಕ ಕ್ಷಣಗಳಿಗೆ ಚಿತ್ರತಂಡ ಸಾಕ್ಷಿಯಾಗಿದೆ. ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ `ಕ’ ಮತ್ತು `ಮಳೆಬಿಲ್ಲು’ ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿರುವ ಚಿತ್ರತಂಡ, ಮೂರನೇ ಹಂತದ ಚಿತ್ರೀಕರಣದತ್ತ ಸಾಗುತ್ತಿದೆ.

Share.
Exit mobile version