ಹಿರಿಯ ವಿದ್ವಾಂಸ ʼಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ʼ ಇನ್ನಿಲ್ಲ..! – Kannada News Now


State

ಹಿರಿಯ ವಿದ್ವಾಂಸ ʼಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ʼ ಇನ್ನಿಲ್ಲ..!

ತೊಕ್ಕೊಟ್ಟು: ಹಿರಿಯ ವಿದ್ವಾಂಸರು, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಝ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ್(71) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

‌ಸುನ್ನಿ ಜಂಇಯ್ಯತುಲ್ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅವರು ಜಾಮಿಯ ಸಅದಿಯ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನ ಆಗಲಿದ್ದಾರೆ.

 




error: Content is protected !!