ಒಡಿಶಾ : ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಕುರ್ಶಾ ಮಣಿಯಕ ಎಂದು ಗುರುತಿಸಲಾಗಿದ್ದು, ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ತನ್ನ ಮಗನ ಮನೆಯ ಮೇಲಿದ್ದ ಅಸ್ಬೆಸ್ಟಾಸ್ ಶೀಟನ್ನು ಮುರಿದ ನಂತರ ತನ್ನ ಕುಟುಂಬದ ಸದಸ್ಯರೊಂದಿಗೆ ತೀವ್ರ ವಾಗ್ವಾದಕ್ಕೆ ಇಳಿದಿದ್ದಾನೆ.
ಮಣಿಯಕನ ಸಹೋದರ, ಮಗ ಮತ್ತು ಸೊಸೆ ಅವನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮರದ ದೊಣ್ಣೆಗಳಿಂದ ಹಲ್ಲೆ ಮಾಡಿದಾಗ ಜಗಳವು ತಿರುವು ಪಡೆಯಿತು. ವೀಡಿಯೊಗಳಲ್ಲಿ ಮಹಿಳೆ ಮತ್ತು ಯುವಕ ವಯಸ್ಸಾದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಹೊಡೆಯುವುದನ್ನು ತೋರಿಸುತ್ತದೆ.
ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗದೆ, ದಾಳಿಯಿಂದ ಗಂಭೀರವಾಗಿ ಗಾಯಗೊಂಡು ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ, ಆರೋಪಿಯು ಸ್ಥಳೀಯರ ಸಹಾಯದಿಂದ ದೇಹವನ್ನು ದಹನ ಮಾಡಿದನು.
ಕೆಲವು ಗ್ರಾಮಸ್ಥರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಅಪರಾಧ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು ಒಬ್ಬ ವ್ಯಕ್ತಿಯನ್ನು ಬಂಧಿಸಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.