ಬೆಂಗಳೂರು: ದೇಶದಲ್ಲಿ ಪಿಎಫ್ ಐ ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದಕ್ಕೆ ಸಚಿವ ವಿ.ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ.
BIGG NEWS: ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ PFI ಸಂಘಟನೆ ಬ್ಯಾನ್ ಮಾಡಿದೆ; ಪ್ರಮೋದ್ ಮುತಾಲಿಕ್ ಸಂತಸ
ರಾಜ್ಯದಲ್ಲಿ ಪಿಎಫ್ ಐ ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವೇ ಕಾರಣವಾಗಿದೆ ಎಂದು ನೇರವಾಗಿ ಆರೋಪಿಸುತ್ತೇನೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಪಿಎಫ್ ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ, 100ಕ್ಕೂ ಹೆಚ್ಚು ಪ್ರಕರಣ ವಾಪಸ್ ಪಡೆಯಲಾಗಿತ್ತು. 1400ಕ್ಕೂ ಹೆಚ್ಚು ಪಿಎಫ್ ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೆಸ್ ಕಾರಣವಾಗಿತ್ತು ಎಂದು ಸುನಿಲ್ ಕುಮಾರ್ ಆರೋಪಿಸಿದ್ದಾರೆ.
BIGG NEWS: ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ PFI ಸಂಘಟನೆ ಬ್ಯಾನ್ ಮಾಡಿದೆ; ಪ್ರಮೋದ್ ಮುತಾಲಿಕ್ ಸಂತಸ
ಪಿಎಫ್ಐ, ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು. ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ ಪಿಎಫ್ ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.