ಬೆಂಗಳೂರು: ರಾಜ್ಯದ ಬರಗಾಲ ಪರಿಸ್ಥಿತಿ ನಿರ್ವಹಣೆಯ ಕುರಿತಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ಸಿಎಂ ಸಿದ್ಧರಾಮಯ್ಯ ನಡೆಸಿದ್ದರು. ಈ ಬೆನ್ನಲ್ಲೇ ಅದಕ್ಕೆ ಅನುದಾನ ಸೇರಿದಂತೆ ವಿವಿಧ ಅನುಮೋದನೆಗಳನ್ನು ನೀಡೋ ಸಂಬಂಧ ಮಾರ್ಚ್.11ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 11-03-2024ರ ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 8ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಮಾರ್ಚ್.11ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತ ವಿವಿಧ ಕಾಮಗಾರಿಗಳಿಗೆ ಅನುಮೋದನೆ ಕೂಡ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
‘ಪುನೀತ್ ರಾಜಕುಮಾರ್’ ಹೆಸರಲ್ಲಿ ರಾಜ್ಯಾದ್ಯಂತ ‘ಹೃದಯ ಜ್ಯೋತಿ’ ಯೋಜನೆ ಪ್ರಾರಂಭ : ದಿನೇಶ್ ಗುಂಡೂರಾವ್
‘ಪಾಕಿಸ್ತಾನ’ ಪರ ಘೋಷಣೆ ಕೇಸ್ : ಬಂಧಿತ ‘ಮೊಹಮ್ಮದ ಶಫಿ ನಾಶಿಪುಡಿ’ ಕೋರ್ಟ್ ಗೆ ಹಾಜರು