ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರದಿಂದ ವಿವಿಧ ನಿಗಮ, ಮಂಡಳಿಯ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಈಗ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.
ಈ ಸಂಬಂಧ ಕಂದಾಯ ಇಲಾಖೆಯ ಧಾರ್ಮಿಕದತ್ತಿಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ದಿನಾಂಕ 22-05-2023ರಲ್ಲಿ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತೆರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಎಲ್ಲಾ ಅಧ್ಯಕ್ಷರು, ನಿರ್ದೇಶಕರುಗಳು, ಸದ್ಯರುಗಳ ನಾಮ ನಿರ್ದೇಶನಗಳನ್ನು ರದ್ದುಗೊಳಿಸಿ ಆದೇಶಿಸ ಹೊರಡಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಆರಾಧನಾ ಸಮಿತಿ, ಶ್ರೀ ಮಲೈ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿನ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರ ಸದಸ್ಯತ್ವವನ್ನು ದಿನಾಂಕ 22-05-2023ರಿದಂ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ವ್ಯಾಪ್ತಿಯಲ್ಲಿನ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು, ನಿರ್ದೇಶಕರುಗಳ ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ 22-05-2023ರಿಂದ ಜಾರಿಗೆ ಬರುವಂತೆ ರದ್ದಪಡಿಸಲು ಸೂಚಿಸಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಮೇ.28ರಂದು ‘UPSC ಪೂರ್ವಭಾವಿ ಪರೀಕ್ಷೆ’: ಬೆಳಿಗ್ಗೆ 6 ಗಂಟೆಯಿಂದಲೇ ‘ನಮ್ಮ ಮೆಟ್ರೋ’ ಸಂಚಾರ ಆರಂಭ
BIG NEWS: ಇಂದು ರಾತ್ರಿಯೊಳಗೆ ಸಚಿವ ಪಟ್ಟಿ ಅಧಿಕೃತ ಬಿಡುಗಡೆ: ನಾಳೆ ಪ್ರಮಾಣವಚನ ಸ್ವೀಕಾರ?