ಬೆಂಗಳೂರು: ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಧಾವಿಸಿದೆ. ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೋದಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.
ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ಆಂಧ್ರಪ್ರದೇಶದಲ್ಲಿ ರೈತರು ಬೆಳೆದ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಉತ್ಪಾದನೆಯ ಶೇ 25ವರೆಗಿನ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ ₹11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ)ಯನ್ನು ನಿಗದಿಪಡಿಸಿದೆ. ಅದನ್ನು ಕರ್ನಾಟಕದ ರೈತರಿಗೂ ವಿಸ್ತರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ: ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್
ಎರಡು ದಿನಗಳಲ್ಲಿ 4ನೇ ಬಾರಿಗೆ ಭಾರತ ಸೇರಿ ವಿಶ್ವದಾದ್ಯಂತ X ಡೌನ್: ಬಳಕೆದಾರರು ಪರದಾಟ | X Down