ಬೆಂಗಳೂರು: ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇಕಡ 10% ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಒಮ್ಮತಾಭಿಪ್ರಾಯ ಕುರಿತು ಚರ್ಚೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇಕಡ 15% ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುಧೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇಕಡ 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂದಪಟ್ಟಂತೆ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ.
ಈ ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಎಂ.ಆರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.
ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ