ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು ಹಾಗೂ ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು… pic.twitter.com/7Zi6ZujxJF
— DIPR Karnataka (@KarnatakaVarthe) January 24, 2025
BIG NEWS: ‘ಸರ್ಕಾರಿ ನೌಕರ’ರು ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ
BREAKING : ಮಾಧ್ಯಮ ಸಂಸ್ಥೆ ‘CNN’ನಿಂದ 200 ಉದ್ಯೋಗಗಳು ವಜಾ |CNN Layoffs