ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ‘ಜನತಾದರ್ಶನ’ಕ್ಕೆ ಮರುಚಾಲನೆ ನೀಡಲು ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.
ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಸೂಚನೆ ನೀಡಿದ್ದಾರ ಎನ್ನಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಚನೆ ನೀಡಿದ್ದಾರೆ. ‘ಜನತಾ ದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವನ್ನಾಗಿಸಲು ಏನೆಲ್ಲಾ ಮಾಡಬೇಕು ಎಂಬ ಬಗ್ಗೆಯೂ ಚರ್ಚೆಯಾಗಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ಮಾಡಿದರು,” ಎಂದು ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.








