ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಜುಲೈ.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದು ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ತದನಂತರ, ಮೇಲೆ ಓದಲಾದ (20ರ ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2021 ರವರೆಗೆ ವಿಸ್ತರಿಸಲಾಗಿತ್ತು, ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ವರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಅಂತ ಹೇಳಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ:31.07.2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ನೇಮಕ: ಸಚಿವ ಮಧು ಬಂಗಾರಪ್ಪ | Teacher Jobs
ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ