ಮಂಡ್ಯ : ಮದ್ದೂರು ತಾಲೂಕಿನ ಮದ್ದೂರು ಕೆರೆ ವ್ಯಾಪ್ತಿಯಲ್ಲಿ ಬರುವ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ್ಮಾಕ ಅನುಮೋದನೆ ದೊರೆತಿದೆ.
ಮದ್ದೂರು ಶಾಸಕ ಕೆ.ಎಂ.ಉದಯ್ ಅವರು, ಮದ್ದೂರು ಕೆರೆ ವ್ಯಾಪ್ತಿಯಲ್ಲಿ ಬರುವ ಬೈರಾನ್ ನಾಲೆ ಹಾಗೂ ವೈದ್ಯನಾಥಪುರ ಕಾಲುವೆಗಳು ಮದ್ದೂರು ಪಟ್ಟಣದ ಹೃದಯ ಭಾಗದಲ್ಲಿ ಇರುವ ಕಾರಣ ಹಲವು ವರ್ಷಗಳಿಂದ ನಾಲೆಗಳ ಸಮರ್ಪಕ ನಿರ್ವಹಣೆ ಇಲ್ಲದೆ ಶೀತಿಲಗೊಂಡಿದ್ದು, ಹೂಳಿನಿಂದ ಆವರಿಸಿರುವ ಕಾರಣ ನಾಲೆಯ ನೀರು ಸರಾಗವಾಗಿ ಹರಿಯುತ್ತಿಲ್ಲ ಹಾಗೂ ಒಳಚರಂಡಿ ನೀರು ಸೇರುತ್ತಿರುವ ಪರಿಣಾಮ ದೊಡ್ಡ ಚರಂಡಿಗಳಾಗಿ ಮಾರ್ಪಟ್ಟಿದೆ ಹೀಗಾಗಿ ಆಧುನೀಕರಣ ಕಾಮಗಾರಿಗೆ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಹೀಗಾಗಿ ಶಾಸಕ ಕೆ.ಎಂ.ಉದಯ್ ಅವರ ಸತತ ಪರಿಶ್ರಮ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 49.50 ಕೋಟಿ ರೂ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ಕೊಡಿಸುವಲ್ಲಿ ಶಾಸಕ ಉದಯ್ ಯಶಸ್ವಿಯಾಗಿದ್ದಾರೆ.
ಈಗಾಗಲೇ ಪಟ್ಟಣ ವ್ಯಾಪ್ತಿಯಲ್ಲಿರುವ ಕೆಮ್ಮಣ್ಣು ನಾಲೆಯನ್ನು 90 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಕೆಲವು ತಿಂಗಳುಗಳಲ್ಲಿ ರೈತರ ಜಮೀನುಗಳಿಗೆ ನೀರು ಸರಾಗವಾಗಿ ಹರಿಯುವಂತೆ ಕಾಮಗಾರಿ ನಡೆಯುತ್ತಿದೆ.
ಇನ್ನು ಜು.28 ರಂದು ಮದ್ದೂರಿನಲ್ಲಿ ನಡೆದ ಸಾಧನಾ ಸಮಾವೇಶ ಮತ್ತು 1146 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಕೆ.ಎಂ.ಉದಯ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮದ್ದೂರಿಗೆ ಮೆಟ್ರೋ, ಏರ್ಪೋರ್ಟ್ ಏನು ಬೇಡ ರೈತರಿಗೆ ನೀರಾವರಿ ಯೋಜನೆ ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಮನವಿ ಮಾಡಿದ್ದರು.
ಹೀಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಅನುಮೋದನೆ ನೀಡಿದ್ದು, ತಾಲೂಕಿನ ಜನತೆಗೆ ರಾಜ್ಯ ಸರ್ಕಾರ ಶ್ರೀ ವರ ಮಹಾಲಕ್ಷ್ಮಿ ಹಬ್ಬದ ಪರವಾಗಿ ಗಿಫ್ಟ್ ನೀಡಿದ್ದು, ಹೀಗಾಗಿ ಶಾಸಕ ಕೆ.ಎಂ.ಉದಯ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
GOOD NEWS: ಹಳೆ ಪಿಂಚಣಿ ಯೋಜನೆ (OPS) ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
BREAKING: ಮತ್ತೆ ಕೆನಡಾದ ಕಪಿಲ್ ಶರ್ಮಾ ಅವರ ಕೆಫೆಯಲ್ಲಿ ಗುಂಡಿನ ದಾಳಿ