ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವದ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ದುರಂತದಿಂದ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಸಂಬಂಧ ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಆ ಬಳಿಕ ಅಮಾನತು ರದ್ದುಗೊಳಿಸಿತ್ತು. ಇಂದು ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಬಿ.ದಯಾನಂದ್ ಅವರನ್ನು ಅಮಾನತು ರದ್ದುಗೊಳಿಸಿದ ಬಳಿಕ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿ ಆದೇಶಿಸಿದೆ.
ಶೇಖರ್ ಹೆಚ್.ಟಿ ಅವರನ್ನು ಗುಪ್ತಚರ ಇಲಾಖೆಯ ಎಸ್ಪಿಯಾಗಿ ನೇಮಿಸಲಾಗಿದೆ. ಈ ಮೂಲಕ ಅಮಾನತು ರದ್ದಾದ ಬಳಿಕ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಹಾಗೂ ಶೇಖರ್ ಹೆಚ್.ಟಿ ಅವರಿಗೆ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶಿಸಿದೆ.
BREAKING: ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧದ ಅತ್ಯಾಚಾರ ಆರೋಪ ಕೇಸ್: ಜಾಮೀನು ಅರ್ಜಿ ತಿರಸ್ಕಾರ
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು