ಬೆಂಗಳೂರು: ರಾಜ್ಯ ಸರ್ಕಾರದಿಂದ ಹಲಸೂರು ಕೆಲೆಯ ಬಳಿಯಲ್ಲಿ ಬರ್ಬರವಾಗಿ ಹತ್ಯೆಯಾದಂತ ರೌಡಿಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತ್ತು.
ಬಿಕ್ಲು ಶಿವ ಹತ್ಯೆ ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂಬುದಾಗಿ ಜನಪ್ರತಿನಿಧಿಗಳ ನ್ಯಾಯಾಲಾಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅಭಿಪ್ರಾಯ ಪಟ್ಟರು. ಆ ಮೂಲಕ ಬಿಕ್ಲು ಶಿವ ಪ್ರಕರಣದಲ್ಲಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು.
ಮತ್ತೊಂದೆಡೆ ಪ್ರಕರಣದ ಎ5 ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರವು ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ವಹಿಸಿ ಆದೇಶ ಹೊರಡಿಸಿದೆ. ಈ ಮೂಲಕ ರೌಡಿ ಶೀಟರ್ ಬಿಕ್ಲು ಶಿವ ಕೇಸ್ ಸಿಐಡಿ ತನಿಖೆಗೆ ವರ್ಗಾವಣೆಯಾದಂತೆ ಆಗಿದೆ.
ವೃದ್ಧ ಪೋಷಕರನ್ನು ನೋಡಿಕೊಳ್ಳಲು ಕೇಂದ್ರ ಸರ್ಕಾರಿ ನೌಕರರು 30 ದಿನ ರಜೆ ಪಡೆಯಬಹುದು: ಕೇಂದ್ರ ಸರ್ಕಾರ
`ಪ್ಯಾರಸಿಟಮಾಲ್’ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು : ವಿಡಿಯೋ ವೈರಲ್ | WATCH VIDEO