ಬೆಂಗಳೂರು: ರಾಜ್ ಸರ್ಕಾರವು ಗ್ರೇಟರ್ ಬೆಂಗಳೂರು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಅಡಿಯಲ್ಲಿ ಐದು ನಗರ ಪಾಲಿಕೆ ಮಾಡಿ ಆದೇಶಿಸಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳು ಮತ್ತು ಸದರಿ ಅಧಿನಿಯಮದ ಪ್ರಕರಣ 5ರ ಉಪ ಪ್ರಕರಣ(1)ರ ಎರಡನೇ ಪರಂತುಕದಲ್ಲಿ ನಿಗದಿಪಡಿಸಲಾದ ಷರತ್ತುಗಳನ್ನು ಪೂರೈಸಿದ ಅನ್ವಯ, ಕರ್ನಾಟಕ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಸಂಖ್ಯೆಯ ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ನಿರ್ದಿಷ್ಟಪಡಿಸಿದ ಗಡಿಗಳ ವಿವರಗಳನ್ನು ಅನುಸೂಚಿ-01 ರಲ್ಲಿ ಪ್ರಕಟಿಸಿದೆ.
5 ನಗರ ಪಾಲಿಕೆಗಳ ಹೆಸರು:
1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
3. ಬೆಂಗಳೂರು ಉತ್ತರ ನಗರ ಪಾಲಿಕೆ
4. ಬೆಂಗಳೂರು ಪೂರ್ವ ನಗರ ಪಾಲಿಕೆ
5. ಬೆಂಗಳೂರು ಕೇಂದ್ರ ನಗರ ಪಾಲಿಕೆ
ಪಸ್ತುತ ಸದರಿ ಅಧಿನಿಯಮದ ಪ್ರಕರಣ 5 ಮತ್ತು ಪ್ರಕರಣ 7ರ ಉಪ ಪ್ರಕರಣ(2) ರಂತೆ ಈ ಅಧಿಸೂಚನೆಯನ್ನು ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಈ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾದ ದಿನಾಂಕದಿಂದ ಮೂವತ್ತು ದಿನಗಳು ಪೂರ್ಣಗೊಂಡ ಬಳಿಕ ಪ್ರಸ್ತಾವನೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಮೇಲೆ ನಿರ್ದಿಷ್ಟಪಡಿಸಲಾದ ಅವಧಿ ಪೂರ್ಣಗೊಳ್ಳುವ ಮೊದಲು ಯಾವುದೇ ವ್ಯಕ್ತಿಯಿಂದ ಈ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗುವ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲಾಗುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸ ಸೌಧ, ಡಾ:ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ
ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ