ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 27ಎ ಅನ್ವಯ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳಊರು ಈ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದಂತ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ಮುಂದಿನ ಮೂರು ತಿಂಗಳ ಅವಧಿಗೆ ಅಥವಾ ಕಲಂ 25ರ ವಿಚಾರಣೆ ಪೂರ್ಣಗೊಳ್ಳುವವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.
ಈ ಆದೇಶವನ್ನು ಉಚ್ಚ ನ್ಯಾಯಾಲಯದ ರಿಟ್ ಅರ್ಜಿಯ ಅನುಸಾರ ನೀಡಿರುವ ಮಧ್ಯಂತರ ಆದೇಶದಂತೆ ನ್ಯಾಯಾಲಯದ ಗಮನಕ್ಕೆ ತಂದು ನ್ಯಾಯಾಲಯವು ನೀಡುವ ನಿರ್ದೇಶನದ ನಂತ್ರ ಈ ಆದೇಶವನ್ನು ಅನುಷ್ಠಾನಗೊಳಿಸುವುದು ಎಂದಿದ್ದಾರೆ.
ಉಚ್ಚ ನ್ಯಾಲಾಯವು ಈ ಪ್ರಕರಣದಲ್ಲಿ ನೀಡುವ ನಿರ್ದೇಶನದಂತೆ ಆಡಳಿತಾಧಿಕಾರಿಯು ಸಂಘದ ಪ್ರಭಾರವನ್ನು ವಹಿಸಿಕೊಂಡು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 25ರ ವಿಚಾರಣೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ವಿಚಾರಣಾಧಿಕಾರಿಗಳಿಗೆ ಒದಗಿಸುವಂತೆ ಸೂಚಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು





chat GPT ಬಳಕೆದಾರರಿಗೆ ಗುಡ್ ನ್ಯೂಸ್: ಭಾರತದಲ್ಲಿ ಒಂದು ವರ್ಷದವರೆಗೆ ಉಚಿತ ‘ಚಾಟ್ ಜಿಪಿಟಿ ಗೋ’








