ಬೆಂಗಳೂರು: : ರಾಜ್ಯ ಗೃಹ ಇಲಾಖೆಯಡಿ ಕಾರ್ಯನಿರ್ವಹಿಸುವ ಪೊಲೀಸ್ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗಳಡಿ ಖಾಲಿ ಇರುವ ಒಟ್ಟು 5987 ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಈ ಬಗ್ಗೆ ಅರ್ಜಿ ಕರೆಯುವ ಸಾಧ್ಯತೆ ಇದೇ ಎನ್ನಲಾಗಿದೆ.
ಗೃಹ ಇಲಾಖೆಯಲ್ಲಿನ ಗೃಹ ಇಲಾಖೆಯ ಈ ಕೆಳಕಂಡ ಯಾವ ಯಾವ ಹುದ್ದೆಗಳ ಅನುಮೋದನೆ ನೀಡಿರುತ್ತದೆ:- ಮತ್ತು ಎಷ್ಟು ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ; ಅಂತ ಶಶೀಲ್ ಜಿ. ನಮೋಶಿ (ಶಿಕ್ಷಕರ ಕ್ಷೇತ್ರ) ಗೃಹ ಸಚಿವರಿಗೆ ಪ್ರಶ್ನೆ ಕೇಳಿದ್ದರು ಗೃಹ ಸಚಿವರು ನೀಡಿರುವ ಈ ಕೆಳಕಂಡತಿದೆ.