ಧಾರವಾಡ: 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹವಾಗಿ ತಲಾ ರೂ.1 ಲಕ್ಷದಂತೆ ಇಲಾಖೆಯಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಲಾಗಿದೆ. ಈ ಅನುದಾನದಲ್ಲಿ ರೂ.10 ಸಾವಿರಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90 ಸಾವಿರಗಳನ್ನು ಶಾಲೆಯ ಎಸ್.ಡಿ.ಎಂ.ಸಿ ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿ ಮಾಡಲು ಪ್ರೋತ್ಸಾಹಧನವನ್ನು ನೀಡಲಾಗುವುದು.
ಜಿಲ್ಲೆಯ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಆಸಕ್ತ ಸರ್ಕಾರಿ ಶಾಲೆಗಳು ಜೂನ್ 27, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಜೊತೆಗೆ ಪ್ರಶಸ್ತಿ ಪತ್ರಗಳು, ಶಾಲೆಯ ದಾಖಲೆಗಳು, ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರ ಜಿಂಟಿ ಖಾತೆಯ ಪಾಸ್ ಪುಸ್ತಕದ ನಕಲು ಹಾಗೂ ದೈಹಿಕ ಶಿಕ್ಷಕರ ಪಾಸ್ ಪುಸ್ತಕದ ನಕಲು ಇವುಗಳನ್ನು ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut