ಮೈಸೂರು : ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು.
ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕರ್ನಾಟಕ ರಾಜ್ಯವು ಸಮೃದ್ಧಿಯಿಂದ ಕೂಡಿದೆ. ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಸಹ ಭರ್ತಿಯಾಗಿವೆ. ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಡ್ಯಾಮಗಳು ಭರ್ತಿಯಾಗಿವೆ. ತಮಿಳುನಾಡು ನಮಗೂ ನೀರಿನ ಸಮಸ್ಯೆ ಬಂದಿತ್ತು. 47 ಟಿಎಂಸಿ ನೀರು ಬಿಡುವಂತೆ ಆದೇಶಿಸಲಾಗಿತ್ತು. ಈಗ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ ರಾಜ್ಯದಲ್ಲಿ 66 ಲಕ್ಷ ಹೆಕ್ಟರ್ ನಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು.
ಇದೆ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಮಾತನಾಡಿ, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ . ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬೇಕಿತ್ತು. ಈಗ ಕಬಿನಿ ಡ್ಯಾಮ್ ತುಂಬಿದೆ ತಮಿಳುನಾಡಿಗೆ ನೀರು ಬಿಡಲಾಗಿದೆ ಎಂದು ಕಬಿನಿ ಜಲಾಶಯದ ಬಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.