ಬೆಂಗಳೂರು : ರಾಜ್ಯದ ಹಲವಡೆ ಅತಿ ಹೆಚ್ಚು ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು.

ಗದಗ ಜಿಲ್ಲೆಯಲ್ಲಿ 65 ಮಿ.ಮೀ, ಕಲ್ಬುರ್ಗಿ ಜಿಲ್ಲೆಯಲ್ಲಿ 40 ಮಿಲಿ ಮೀಟರ್ ಮಳೆಯಾಗಿದೆ.ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ 7 ಮಿ.ಮೀ, ಹೊನ್ನಾವರದಲ್ಲಿ 3 ಮಿ.ಮೀ, ರಾಯಚೂರು ಜಿಲ್ಲೆಯಲ್ಲಿ 40.4 ಮಿ.ಮೀ ಬೆಂಗಳೂರಲ್ಲಿ 37 ಮಿ.ಮೀರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು.

ಸುಳಿ ಗಾಳಿ ಪರಿಣಾಮ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು

Share.
Exit mobile version