Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM

ನವದೆಹಲಿಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ಐದರಿಂದ ಆರು ಮಂದಿ ಸಿಲುಕಿರುವ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

18/03/2026 10:35 AM

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಇಂದು ದಾಖಲೆಯ ‘42.8 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು: ಹವಾಮಾನ ಇಲಾಖೆ ಮಾಹಿತಿ | Heat Weather
KARNATAKA

ರಾಜ್ಯದಲ್ಲಿ ಇಂದು ದಾಖಲೆಯ ‘42.8 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು: ಹವಾಮಾನ ಇಲಾಖೆ ಮಾಹಿತಿ | Heat Weather

By kannadanewsnow0915/03/2025 4:45 PM

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ದಿನೇ ದಿನೇ ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿರುವುದು ಆಘಾತಕಾರಿಯಾಗಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಇಂದು ದಾಖಲೆ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲೇ ಅತೀ ಹೆಚ್ಚು ಇಂದು ದಾಖಲಾಗಿರುವಂತ ತಾಪಮಾನವಾಗಿರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಮಾಹಿತಿ ನೀಡಿದೆ.

14.03.25 ರ 08.30 AM ನಿಂದ 15.03.25 ರ 08.30 AM ವರೆಗೆ ನಕ್ಷೆಗಳೊಂದಿಗೆ ಜಿಲ್ಲಾವಾರು ಸರಾಸರಿ ಕನಿಷ್ಠ, ಗರಿಷ್ಠ ಮತ್ತು ಏರಿಳಿತ ತಾಪಮಾನ(°C) ಕೋಷ್ಟಕ.
Districtwise Average #Minimum, #Maximum & Fluctuation #temperature (°C) table with maps from 08.30 AM of 14.03.25 to 08.30 AM of 15.03.25. #KSNDMC pic.twitter.com/UnqCL0Q1kB

— Karnataka State Natural Disaster Monitoring Centre (@KarnatakaSNDMC) March 15, 2025

ಹೀಟ್ ವೇವ್ : ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ

ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು:

ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು, ಟೋಪಿ ಧರಿಸಬೇಕು.

ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ದೇಹವನ್ನು ತಂಪಾಗಿಡಲು ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಸೇವನೆ ಮಾಡಬೇಕು. ಸಾಕು ಪ್ರಾಣಿ, ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಸಾಕಷ್ಟು ಕುಡಿಯಲು ಸಾಕಷ್ಟು ನೀರು ಕೊಡಬೇಕು. ಫ್ಯಾನ್ ಗಳನ್ನು ಬಳಸಿ, ತಣ್ಣೀರಿನಲ್ಲಿ ಸ್ನಾನ ಮಾಡಿ, ಒದ್ದೆಯಾದ ಬಟ್ಟೆಗಳನ್ನು ಬಳಸಬೇಕು. ತಂಪಾದ ಸಮಯ ಹಾಗೂ ಸ್ಥಳದಲ್ಲಿ ಕೆಲಸ ನಿರ್ವಹಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಇವುಗಳನ್ನು ಮಾಡಬೇಡಿ :

ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಗಡೆ ತಾಪಮಾನವು ಹೆಚ್ಚಿ ಮಕ್ಕಳಿಗೆ ಅಪಾಯಕಾರಿಯಾಗಬಹುದು. ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬಾರದು. ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಹಾಗೂ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡಿಗೆ ಮಾಡುವ ಸ್ಥಳದಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ. ಚಪ್ಪಲಿ ಧರಿಸದೆ ಹೊರಗಡೆ ಹೋಗಬಾರದು. ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ನೀಡಿರುವ ಈ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಕೋರಲಾಗಿದೆ.

ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ: ಇಬ್ಬರಿಗೆ ಗಂಭೀರ ಗಾಯ

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM2 Mins Read

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM1 Min Read

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM

ನವದೆಹಲಿಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ಐದರಿಂದ ಆರು ಮಂದಿ ಸಿಲುಕಿರುವ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

18/03/2026 10:35 AM

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

By kannadanewsnow5718/03/2026 10:37 AM KARNATAKA 2 Mins Read

ಬೆಂಗಳೂರು: ಕುಟುಂಬದ ಆಸ್ತಿ ಹಂಚಿಕೆ, ಪಿಂಚಣಿ ಸೌಲಭ್ಯ ಅಥವಾ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಸಾಬೀತುಪಡಿಸಲು ‘ವಂಶವೃಕ್ಷ’ ಅಥವಾ ‘ವಂಶಾವಳಿ ಪ್ರಮಾಣಪತ್ರ’…

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM

ಯುಗಾದಿ ಹಬ್ಬಕ್ಕೆ ಬೇವು ಬೆಲ್ಲಕ್ಕೆ ಹೆಚ್ಚು ಪ್ರಾಮುಖ್ಯತೆ ಏಕೆ?

18/03/2026 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.