ಬೆಂಗಳೂರು: ಸರ್ಕಾರಿ ಶಾಲೆಯ ( Government School ) ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ( BJP Government ) ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Farmenr CM Siddaramaiah ) ವಾಗ್ಧಾಳಿ ನಡೆಸಿದ್ದಾರೆ.
ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ @BJP4Karnataka ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ.
ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..!ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು. 1/5#SaveStudents pic.twitter.com/1eAq6gV3k6
— Siddaramaiah (@siddaramaiah) October 21, 2022
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ ಎಂಬುದಾಗಿ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ @BJP4Karnataka ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ. 2/5#SaveStudents pic.twitter.com/b6By2sCdVI
— Siddaramaiah (@siddaramaiah) October 21, 2022
ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.
ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ. @CMofKarnataka 3/5#SaveStudents pic.twitter.com/6LzDEYi06L
— Siddaramaiah (@siddaramaiah) October 21, 2022
ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ @BJP4Karnataka ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ. 4/5#SaveStudents pic.twitter.com/19COJG5shm
— Siddaramaiah (@siddaramaiah) October 21, 2022
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ @BJP4Karnataka ಸರ್ಕಾರವನ್ನು ಒತ್ತಾಯಿಸುತ್ತೇನೆ. 5/5#SaveStudents pic.twitter.com/HWS1zB7AR8
— Siddaramaiah (@siddaramaiah) October 21, 2022