Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆ: ಜೂನ್ 18ರಂದು ಮತದಾನ : ವೇಳಾಪಟ್ಟಿ ಪ್ರಕಟ

ALERT : ಮೃತ ವ್ಯಕ್ತಿಯ `ATM ಕಾರ್ಡ್’ ಬಳಸಿದ್ರೆ ಜೈಲು ಶಿಕ್ಷೆ ಫಿಕ್ಸ್.! ನಿಯಮಗಳೇನು ತಿಳಿಯಿರಿ

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 400 ಅಂಕ ಕುಸಿತ, 23,300 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ
KARNATAKA

BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದಂತ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದ್ರೇ ಯಾರನ್ನೆಲ್ಲ ಅಮಾನತುಗೊಳಿಸಲಾಗಿತ್ತು.? ಅಧಿಕೃತ ಆದೇಶದಲ್ಲಿ ಏನಿದೆ ಅಂತ ಮುಂದೆ ಓದಿ.

ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿಯವರು ಅಧಿಕೃತ ಆದೇಶ ಹೊರಡಿಸಿದ್ದು, ಕಳೆದ ಅಧಿವೇಶನದ ಅವಧಿಯಲ್ಲಿ ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ದೊಡ್ಡನಗೌಡ ಹೆಚ್. ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು), ಡಾ: ಅಶ್ವಥ್‌ನಾರಾಯಣ್ ಸಿ.ಎನ್..  ಎಸ್.ಆರ್. ವಿಶ್ವನಾಥ್, ಬಿ.ಎ. ಬಸವರಾಜ, ಎಂ.ಆರ್. ಪಾಟೀಲ್, ಚನ್ನಬಸಪ್ಪ (ಚೆನ್ನಿ), ಬಿ. ಸುರೇಶ್‌ಗೌಡ, ಉಮಾನಾಥ್ ಎ. ಕೋಟ್ಯಾನ್, ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಸಿ.ಕೆ. ರಾಮಮೂರ್ತಿ, ಯಶಪಾಲ್ ಎ. ಸುವರ್ಣ, ಬಿ.ಪಿ. ಹರೀಶ್, ಡಾ: ಭರತ್‌ಶೆಟ್ಟಿ ವೈ., ಮುನಿರತ್ನ, ಬಸವರಾಜ್ ಮತ್ತಿಮೂಡ್, ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 348ರ ಮೇರೆಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಿದ್ದ ನಿರ್ಣಯವನ್ನು ಹಿಂತೆಗೆದುಕೊಳ್ಳುವಂತೆ ವಿರೋಧ ಪಕ್ಷದ ನಾಯಕರು ಹಾಗೂ ಅಮಾನತ್ತುಗೊಂಡ ಸದಸ್ಯರು ಸಲ್ಲಿಸಿದ್ದ ಮನವಿಯನ್ನು ಮಾಡಿದ್ದರು ಎಂದಿದ್ದಾರೆ.

ದಿನಾಂಕ: 25.05.2025ರಂದು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಯವರು, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು, ಉಪ ಸಭಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರೊಂದಿಗೆ ಸನ್ಮಾನ್ಯ ಸಭಾಧ್ಯಕ್ಷರು ಸಭೆ ನಡೆಸಿರುತ್ತಾರೆ ಎಂದು ಹೇಳಿದ್ದಾರೆ.

ಸದರಿ ಸಭೆಯಲ್ಲಿ, ಅಮಾನತ್ತಿನ ಅವಧಿಯಲ್ಲಿ ಈಗಾಗಲೇ 2 ತಿಂಗಳು ಕಳೆದಿದ್ದು, ಸದರಿ ಅವಧಿಯಲ್ಲಿ ಅಮಾನತ್ತುಗೊಂಡಿರುವ ಸದಸ್ಯರುಗಳು ತಮ್ಮ ನಡೆಯ ಬಗ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು ಹಾಗೂ ಇನ್ನುಮುಂದೆ ಸಂವಿಧಾನಾತ್ಮಕವಾಗಿ ಸದನದ ಕಾರ್ಯಕಲಾಪಗಳಲ್ಲಿ ಸಂಯಮದಿಂದ ನಡೆದುಕೊಳ್ಳುವುದಾಗಿ ತಿಳಿಸಿರುವುದನ್ನು ಪರಿಗಣಿಸಿ ಆಡಳಿತ ಪಕ್ಷದ ಶಾಸಕಾಂಗ ನಾಯಕರಾದ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು, ಮಾನ್ಯ ವಿರೋಧ ಪಕ್ಷದ ನಾಯಕರು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಒಮ್ಮತ ಸೂಚಿಸಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಾನ್ಯ ಸದಸ್ಯರುಗಳು ಸಂವಿಧಾನತ್ಮಕವಾಗಿ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಅಮಾನತ್ತುಗೊಳಿಸಲಾಗಿರುವ ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ದೊಡ್ಡನಗೌಡ ಹೆಚ್. ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು), ಡಾ: ಅಶ್ವಥ್‌ನಾರಾಯಣ್ ಸಿ.ಎನ್., ಎಸ್.ಆರ್. ವಿಶ್ವನಾಥ್, ಬಿ.ಎ. ಬಸವರಾಜ, ಎಂ.ಆರ್. ಪಾಟೀಲ್‌, ಚನ್ನಬಸಪ್ಪ (ಚೆನ್ನಿ), ಬಿ. ಸುರೇಶ್‌ಗೌಡ, ಉಮಾನಾಥ್ ಎ. ಕೋಟ್ಯಾನ್, ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಸಿ.ಕೆ. ರಾಮಮೂರ್ತಿ, ಯಶಪಾಲ್ ಎ. ಸುವರ್ಣ, ಬಿ.ಪಿ. ಹರೀಶ್, ಡಾ: ಭರತ್‌ಶೆಟ್ಟಿ ವೈ, ಮುನಿರತ್ನ, ಬಸವರಾಜ್ ಮತ್ತಿಮೂಡ್, ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಅಮಾನತ್ತುಗೊಳಿಸಲಾಗಿದ್ದ ನಿರ್ಣಯವನ್ನು ಹಿಂತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸದರಿಯವರುಗಳ ಅಮಾನತ್ತು ಅವಧಿಯಲ್ಲಿ ವಿಧಿಸಿದ್ದ ಈ ಕೆಳಕಂಡ ಪರಿಣಾಮಗಳು ತಕ್ಷಣದಿಂದ ರದ್ದುಗೊಳ್ಳುತ್ತವೆ:

1. ಅವರುಗಳು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
2. ಅವರು ಸದಸ್ಯರಾಗಿರುವ ವಿಧಾನಮಂಡಲದ ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
3. ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
4. ಅಮಾನತ್ತಿನ ಅವಧಿಯಲ್ಲಿ ಅವರುಗಳು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ. 5. ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರುಗಳು ಮತದಾನ ಮಾಡುವಂತಿಲ್ಲ.
6. ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.

ಈ ಮೇಲ್ಕಂಡ ಅಮಾನತ್ತು ನಿರ್ಣಯವನ್ನು ಹಿಂಪಡೆದ ಬಗ್ಗೆ ಮುಂದಿನ ಅಧಿವೇಶನದಲ್ಲಿ ಸದನದ ಘಟನೋತ್ತರ ಅನುಮೋದನೆ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

BREAKING: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು 9 ಮಂದಿಗೆ ಕೋವಿಡ್ ಪಾಸಿಟಿವ್ | Karnataka Covid19 Update

BIG NEWS : ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!

Share. Facebook Twitter LinkedIn WhatsApp Email

Related Posts

ALERT : ಮೃತ ವ್ಯಕ್ತಿಯ `ATM ಕಾರ್ಡ್’ ಬಳಸಿದ್ರೆ ಜೈಲು ಶಿಕ್ಷೆ ಫಿಕ್ಸ್.! ನಿಯಮಗಳೇನು ತಿಳಿಯಿರಿ

2 Mins Read

BREAKING : ಕಾಂತಾರ ಸಿನಿಮಾ ನಟಿ `ರುಕ್ಮಿಣಿ ವಸಂತ್’ ನಕಲಿ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ `FIR’ ದಾಖಲು.!

1 Min Read

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

2 Mins Read
Recent News

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆ: ಜೂನ್ 18ರಂದು ಮತದಾನ : ವೇಳಾಪಟ್ಟಿ ಪ್ರಕಟ

ALERT : ಮೃತ ವ್ಯಕ್ತಿಯ `ATM ಕಾರ್ಡ್’ ಬಳಸಿದ್ರೆ ಜೈಲು ಶಿಕ್ಷೆ ಫಿಕ್ಸ್.! ನಿಯಮಗಳೇನು ತಿಳಿಯಿರಿ

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 400 ಅಂಕ ಕುಸಿತ, 23,300 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

ಪಾಕಿಸ್ತಾನದಲ್ಲಿ ಜಸ್ಪ್ರೀತ್ ಬುಮ್ರಾ? ಭಾರತೀಯ ವೇಗಿ ಬುಮ್ರಾ ಹೋಲುವ ಯುವಕನ ವಿಡಿಯೋ ವೈರಲ್ | WATCH VIDEO

State News
KARNATAKA

ALERT : ಮೃತ ವ್ಯಕ್ತಿಯ `ATM ಕಾರ್ಡ್’ ಬಳಸಿದ್ರೆ ಜೈಲು ಶಿಕ್ಷೆ ಫಿಕ್ಸ್.! ನಿಯಮಗಳೇನು ತಿಳಿಯಿರಿ

By kannadanewsnow57 KARNATAKA 2 Mins Read

ಸಾಮಾನ್ಯವಾಗಿ ನಮ್ಮ ಮನೆಗಳಲ್ಲಿ ಪೋಷಕರು ಅಥವಾ ಹಿರಿಯರು ತುರ್ತು ಸಂದರ್ಭಗಳಲ್ಲಿ ಹಣ ಡ್ರಾ ಮಾಡಲು ತಮ್ಮ ಎಟಿಎಂ ಕಾರ್ಡ್‌ ಹಾಗೂ…

BREAKING : ಕಾಂತಾರ ಸಿನಿಮಾ ನಟಿ `ರುಕ್ಮಿಣಿ ವಸಂತ್’ ನಕಲಿ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ `FIR’ ದಾಖಲು.!

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.